ಶುಚಿತ್ವಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮುಂಜಾನೆ ದುಬಾರೆಯ ರಿವರ್ ರಾಫ್ಟಿಂಗ್ ಅಸೋಸಿಯೇಷನ್ ವತಿಯಿಂದ ದುಬಾರೆ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಗುಡ್ಡೆಹೊಸೂರು
ಶುಚಿತ್ವಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮುಂಜಾನೆ ದುಬಾರೆಯ ರಿವರ್ ರಾಫ್ಟಿಂಗ್ ಅಸೋಸಿಯೇಷನ್ ವತಿಯಿಂದ ದುಬಾರೆ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ದುಬಾರೆಯ ರಿವರ್ ರಾಫ್ಟಿಂಗ್ ಗೈಡ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸಿಬ್ಬಂದಿ, ಸ್ಥಳೀಯ ವರ್ತಕರು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಪ್ರವಾಸಿ ತಾಣದ ಸುತ್ತಮುತ್ತಲಿನ ಪರಿಸರದಲ್ಲಿ ಎಸೆಯಲಾಗಿದ್ದ ಕಸ ತ್ಯಾಜ್ಯವನ್ನು ಶ್ರಮದಾನದ ಮೂಲಕ ಆಯ್ದು ಶೇಖರಿಸಿ ಟ್ರ್ಯಾಕ್ಟರ್ ಗಳಲ್ಲಿ ಕಸ ಸಂಸ್ಕರಣ ಘಟಕಕ್ಕೆ ಸಾಗಿಸಲಾಯಿತು.
ಶುಚಿತ್ವಕ್ಕೆ ಒತ್ತು ನೀಡವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಪ್ರವಾಸಿ ಸ್ಥಳಗಳು ಹಾಗೂ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರವಾಸೋದ್ಯಮ ಇಲಾಖೆ, ಕೊಡಗು. ರೋಟರಿ, ಲಯನ್ಸ್, ರೆಡ್ ಕ್ರಾಸ್, ಚೇಂಬರ್ ಆಫ್ ಕಾಮರ್ಸ್, ಹೋಟೆಲ್ ಅಸೊಸಿಯೇಷನ್, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಆಂದೋಲನ ನಡೆಯುತ್ತಿದೆ.