ಸಾರಾಂಶ
ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಆವರಣದಲ್ಲಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಆವರಣದಲ್ಲಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ನಾಪೋಕ್ಲು ಮಡಿಕೇರಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ದಿವ್ಯ ಮಂದಪ್ಪ, ಸದಸ್ಯರಾದ ಉಮಾಲಕ್ಷ್ಮಿ, ಚಂದ್ರಕಲಾ, ಶಂಕರ, ದಿಲಿಶ್, ರಮ್ಯಾ, ಪೊನ್ನಮ್ಮ, ಸುನಿತಾ, ಶರವಣ, ಮಾಯಿಲಪ್ಪ, ನಾರಾಯಣ, ಆಶಾಲತಾ ಉಪಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (pdo) ಚೋಂದಕ್ಕಿ, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಬೇಬ, ಸಾಬಾ ತಿಮ್ಮಯ್ಯ, ಕಾಲೇಜು ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು, ಹಾಜರಿದ್ದರು.