ಸಾರಾಂಶ
ಕನ್ನಡಪ್ರಭ ವಾರ್ತೆ ಸಕಲೇಶಪುರ
ಸೇವೆ ಎಂಬುದು ಭಾರತೀಯ ಜನತಾ ಪಕ್ಷದ ಉಸಿರಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಬಿಜೆಪಿ ಯುವ ಮೋರ್ಚಾ ಸಕಲೇಶಪುರ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಹಾಗೂ ಗಾಂಧಿಜಯಂತಿ ಹಾಗೂ ಲಾಲಾ ಬಹುದ್ದೂರ್ ಶಾಸ್ತ್ರೀ ಜಯಂತಿ ಹಿನ್ನೆಲೆ ಪಟ್ಟಣದ ಸುಭಾಷ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿಯವರ ಸೆಪ್ಟೆಂಬರ್ ೧೭ರ ಜನ್ಮದಿನದ ಹಿನ್ನೆಲೆಯಲ್ಲಿ ಸೆ.೧೭ರಿಂದ ಅಕ್ಟೋಬರ್ ೨ರ ವರೆಗೆ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಿಜೆಪಿ ಮಂಡಲ ಹಾಗೂ ಲಯನ್ಸ್ ಸೇವಾ ಸಂಸ್ಥೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸದಸ್ಯತ್ವ ಅಭಿಯಾನ ಜೊತೆಗೆ ಪಾನೀಯ ವಿತರಣೆ ಮಾಡಲಾಗಿದೆ. ನಗರವನ್ನು ಸ್ವಚ್ಛ, ಚೊಕ್ಕವಾಗಿಡುವುದೇ ನಮ್ಮ ಮುಖ್ಯ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರಿಗೆ ಹೇಳಿಕೊಟ್ಟಿರುವ ಸಂಸ್ಕೃತಿ ಕೂಡ ಇದೆ ಆಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡಲು ಹಂತ ಹಂತವಾಗಿ ಯೋಜನೆ ರೂಪಿಸಲಾಗುವುದು. ಇದರ ಜೊತೆಗೆ ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸುಮಾರು ೧೦ಕ್ಕೂ ಹೆಚ್ಚು ಚೀಲಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಆಯ್ದು ಮೈದಾನವನ್ನು ಸ್ವಚ್ಛಗೊಳಿಸಿದರು.
ಇದೇ ವೇಳೆ ಶಾಸಕರು ಬಾಣಂತಿಯರಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್, ಯುವ ಮೋರ್ಚಾ ಅಧ್ಯಕ್ಷ ಹಲಸುಲಿಗೆ ನಿಖಿಲ್, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತಾ ವಿಶ್ವನಾಥ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಧು ಬೊಮ್ಮನಕೆರೆ, ಅಗ್ನಿ ಸೋಮಶೇಖರ್, ನಗರ ಅಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಸುಧೀಶ್, ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್ ಸಂಘಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.