ತಾಲೂಕು ಅಡಳಿತ ಸೌಧದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

| Published : Apr 04 2024, 01:04 AM IST

ಸಾರಾಂಶ

ತರೀಕೆರೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅವರ ನೇತೃತ್ವದಲ್ಲಿ ಪುರಸಭೆ ವತಿಯಿಂದ ನಿರ್ವಹಿಸಲಾಯಿತು.

ತರೀಕೆರೆ: ತಾಲೂಕು ಆಡಳಿತ ಸೌಧದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅವರ ನೇತೃತ್ವದಲ್ಲಿ ಪುರಸಭೆ ವತಿಯಿಂದ ನಿರ್ವಹಿಸಲಾಯಿತು.

ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿ ತರೀಕೆರೆ ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ, ಈ ಹಿಂದೆಯೂ ಪುರಸಭೆ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಲಾಗಿತ್ತು. ಈಗ ಗಿಡ ಗಂಟೆಗಳು ಬೆಳೆದಿರುವುದರಿಂದ ಸಾರ್ವಜನಿಕರ ಹಿತದೃಷ್ಠಿಯಿಂದ ಮತ್ತೊಮ್ಮೆ ಈ ದಿನ ಸ್ವಚ್ಛ ಮಾಡಲಾಗುತ್ತಿದೆ ಎಂದು ತಿಳಿಸಿದರು.ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ. ಪಟ್ಟಣದಲ್ಲಿ ಮನೆಗಳಲ್ಲಿ ಮತ್ತು ಅಂಗಡಿಗಳಲ್ಲಿ ಕಸವನ್ನು ರಸ್ತೆಗೆ ಎಸೆಯದೆ ಕಸ ಸಂಗ್ರಹಣಾ ಟಿಪ್ಪರ್ ಗಳಿಗೆ ನೀಡಲು ಮನವಿ ಮಾಡಿದ ಅವರು ನಿಷೇಧಿತ ಪ್ಲಾಸ್ಟಿಕ್‌ ಬಳಸದೆ ಪರಿಸರಕ್ಕೆ ಪೂರಕವಾದ ಬಟ್ಟೆ ಕೈಚೀಲಗಳನ್ನು ಬಳಸುವಂತೆ ಹಾಗೂ ಪ್ರಸ್ತುತ ಬೇಸಿಗೆ ಅವಧಿಯಲ್ಲಿ ನೀರಿನ ಅಭಾವ ಇರುವುದರಿಂದ ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದರು.

ಕಿರಿಯ ಅಭಿಯಂತರ ವಿನಾಯಕ್ , ಆರೋಗ್ಯ ಪರಿವಿಕ್ಷಕರಾದ ಮಂಜುನಾಥ್ ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು. ತಾಲೂಕು ಅಡಳಿತ ಸೌಧದ ಅವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

3ಕೆಟಿಆರ್.ಕೆ.3ಃ

ತರೀಕೆರೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಪುರಸಭೆಯಿಂದ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.