ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು : ಭೋಜೇಗೌಡ ಸೂಚನೆ

| Published : Jul 19 2025, 02:00 AM IST

ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು : ಭೋಜೇಗೌಡ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರುಕಸ ಎಲ್ಲೆಂದರಲ್ಲಿ ಹಾಕಿ ಪ್ರಯಾಣಿಕರಿಗೆ ತೊಂದರೆ ನೀಡಬಾರದು. ಸ್ವಚ್ಛತೆ ಕಾಪಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ

ಕನ್ನಡ ಪ್ರಭ ವಾರ್ತೆ, ಚಿಕ್ಕಮಗಳೂರು

ಕಸ ಎಲ್ಲೆಂದರಲ್ಲಿ ಹಾಕಿ ಪ್ರಯಾಣಿಕರಿಗೆ ತೊಂದರೆ ನೀಡಬಾರದು. ಸ್ವಚ್ಛತೆ ಕಾಪಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜನರ ಆರೋಗ್ಯದ ದೃಷ್ಟಿಯಿಂದ ನಿಗಮದವರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಫುಟ್‌ ಪಾತ್‌ಗಳ ಮೇಲೆ ವಸ್ತುಗಳನ್ನು ಇಟ್ಟು ಮಾರಾಟ ಮಾಡುವ ವರ್ತಕರ ವಿರುದ್ಧ ನಗರಸಭೆ ಅಧಿಕಾರಿಗಳು ಕ್ರಮ ಜರುಗಿಸ ಬೇಕು. ತರಕಾರಿ ಮಾರಾಟ ಮಾಡುವ ಗಾಡಿಯವರು ಕಸವನ್ನು ಒಂದೆಡೆ ಹಾಕಬೇಕು ಇದರಿಂದ ಪೌರ ಕಾರ್ಮಿಕ ರಿಗೆ ಸ್ವಚ್ಛತೆಗೆ ಅನುಕೂಲವಾಗಲಿದೆ ಎಂದರು.

ನಗರಸಭೆ ಸದಸ್ಯ ಎ.ಸಿ. ಕುಮಾರ್‌ಗೌಡ ಮಾತನಾಡಿ, ನಗರದ ನಾಗರಿಕರ ಹಿತಾಸಕ್ತಿ ಹಿನ್ನೆಲೆಯಲ್ಲಿ ನಗರ ಸುಂದರ ಸ್ವಚ್ಛವಾಗಿರಬೇಕೆಂಬ ದೃಷ್ಟಿಕೋನದಲ್ಲಿ ವಿಧಾನ ಪರಿಷತ್ ಸದಸ್ಯರು, ನಗರಸಭಾಧ್ಯಕ್ಷ, ಪೌರಾಯುಕ್ತ, ಪೊಲೀಸ್ ಇಲಾಖೆ ಎಲ್ಲರೂ ಒಟ್ಟುಗೂಡಿ ರಸ್ತೆ ಬದಿ ವಸ್ತುಗಳನ್ನಿಡದಂತೆ ಸೂಚನೆ ನೀಡಿದ್ದು, ನಗರಸಭೆ ನಿಯಮ ಉಲ್ಲಂಘಿಸುವ ವರ್ತಕರಿಗೆ ಖಡಾಕ್‌ ಸೂಚನೆ ನೀಡಲಾಗಿದೆ ಎಂದರು.

ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದ ವ್ಯಾಪ್ತಿಯಲ್ಲಿ ಸ್ವಚ್ಛತಾ ಆಂದೋಲನ ಕೈಗೊಂಡಿರುವ ಜೊತೆಗೆ ಫುಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವ ಕಾರ್ಯ ಬಿರುಸಿನಿಂದ ನಡೆಯುತ್ತಿದೆ ಎಂದು ತಿಳಿಸಿದರು.ನಗರಸಭೆ ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ಮಾಡುತ್ತಿರುವ ವರ್ತಕರ ಮೇಲೆ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮಕೈಗೊಂಡು ಪರವಾನಗಿ ರದ್ದುಪಡಿಸಿ ಅಂಗಡಿ ಬಂದ್ ಮಾಡುವುದಾಗಿ ಎಚ್ಚರಿಸಿದರು.

18 ಕೆಸಿಕೆಎಂ 1ಚಿಕ್ಕಮಗಳೂರು ನಗರದಲ್ಲಿ ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಪ್ರದಕ್ಷಿಣೆ ನಡೆಸಿ, ಫುಟ್‌ ಪಾತ್‌ ಮೇಲೆ ಇಟ್ಟಿರುವ ವಸ್ತುಗಳನ್ನು ತೆರವುಗೊಳಿಸಬೇಕೆಂದು ಸೂಚನೆ ನೀಡಿದರು.