ಸಾರಾಂಶ
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜು.17ವರೆಗೆ ಜಿಲ್ಲೆಯ ಆಯ್ದ 20 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸರ್ವೇ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ತಿಳಿಸಿದ್ದಾರೆ.
ಚಿತ್ರದುರ್ಗ : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜು.17ವರೆಗೆ ಜಿಲ್ಲೆಯ ಆಯ್ದ 20 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸರ್ವೇ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ತಿಳಿಸಿದ್ದಾರೆ.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮಗಳಲ್ಲಿ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣ, ಘನ, ದ್ರವ ಹಾಗೂ ಮಲ ತ್ಯಾಜ್ಯ ನಿರ್ವಹಣೆ, ಗೋಬರ್-ಧನ ಘಟಕ, ಮಾಹಿತಿ ಶಿಕ್ಷಣ ಮತ್ತು ಸಂವಹನ ಹಾಗೂ ತರಬೇತಿ ಕುರಿತು ಲಕ್ನೋದ ಅಕಾಡೆಮಿ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ ಸಂಸ್ಥೆ ನೇರವಾಗಿ ಸರ್ವೆ ಕಾರ್ಯ ನಡೆಸಲಿದೆ. ನಿಗದಿ ಪಡಿಸಿದ ದಿನಾಂಕಗಳನ್ನು ಸಂಸ್ಥೆ ಪ್ರತಿನಿಧಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಈ ವೇಳೆ ಸಾರ್ವಜನಿಕರಿಂದ SSG-2025 ಮೊಬೈಲ್ ಆಪ್ ಹಾಗೂ ವೆಬ್ ಪೋರ್ಟ್ಲ್ ಮೂಲಕ ಯೋಜನೆಗಳ ಸೌಲಭ್ಯ ಕುರಿತು ಅಭಿಪ್ರಾಯನು ಸಂಗ್ರಹಿಸುವರು. ಫಲಾನುಭವಿಗಳು ಹಾಗೂ ಸಾರ್ವಜನಿಕರು ಸ್ಮಾರ್ಟ್ ಫೋನ್ ಬಳಿಸಿ SSG-2025 ಆಪ್ ಅಥವಾ ಪೋರ್ಟ್ಲ್ ಮೂಲಕ ಅಭಿಪ್ರಾಯ ತಿಳಿಸುವಂತೆ ಸೋಮಶೇಖರ್ ಮನವಿ ಮಾಡಿದ್ದಾರೆ.
ಸರ್ವೇಯಲ್ಲಿ ಗ್ರಾಪಂಗಳ ಪ್ರಗತಿ ಪರಿಶೀಲಿಸಿ ಅಂಕಗಳ ಮೂಲಕ ಶ್ರೇಯಾಂಕವನ್ನು ನೀಡಲಾಗುವುದು. ಅತಿ ಹೆಚ್ಚು ಅಂಕ ಪಡೆದ ರಾಜ್ಯ ಹಾಗೂ ಜಿಲ್ಲೆಗಳಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸನ್ಮಾನಿಸಲಾಗುವುದು. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಿಸಿದ ವಿವಿಧ ಘಟಕಗಳು ನಿರಂತರವಾಗಿ ಕಾರ್ಯಚರಣೆ ನಡೆಸುತ್ತಾ ಸುಸ್ಥಿರತೆ ಕಾಯ್ದೆಕೊಳ್ಳುವ ದೃಷ್ಠಿಯಿಂದ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಖಾತ್ರಿ ಪಡಿಸಿಕೊಳ್ಳಲು ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಇದರೊಂದಿಗೆ ಈ ಘಟಕಗಳ ಮೌಲ್ಯಮಾಪನವನ್ನು ನಡೆಸಿದಂತಾಗುತ್ತದೆ. ಜಿಲ್ಲೆಯ ಎಲ್ಲಾ ಗ್ರಾಪಂಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಪಿಡಿಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸರ್ವೇ ಪ್ರತಿನಿಧಿಗಳಿಗೆ ಅಗತ್ಯ ಸಹಕಾರ ಮತ್ತು ಮಾಹಿತಿ ನೀಡಿ ಸರ್ವೇ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚಿಸಿದ್ದಾರೆ.