ಸಾರಾಂಶ
ಮಲೆ ಮಾದೇಶ್ವರ ಬೆಟ್ಟದ ಮುಖ್ಯ ರಸ್ತೆಗೆ ಬಿದಿರು ಮರ ಬಾಗಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ತೆರವುಗೊಳಿಸುವಂತೆ ಭಕ್ತರು ಅಗ್ರಹಿಸಿದ್ದಾರೆ.
ಹನೂರು: ಮಲೆ ಮಾದೇಶ್ವರ ಬೆಟ್ಟದ ಮುಖ್ಯ ರಸ್ತೆಗೆ ಬಿದಿರು ಮರ ಬಾಗಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ತೆರವುಗೊಳಿಸುವಂತೆ ಭಕ್ತರು ಅಗ್ರಹಿಸಿದ್ದಾರೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಹಲವಾರು ತಿರುವು ಇರುವುದರಿಂದ ಹಲವು ಕಡೆ ಬಿದಿರು ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಹೀಗಾಗಿ ಸಂಚಾರಕ್ಕೆ ತೊಡಕಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆಗೆ ಬಾಗಿರುವ ಗಿಡ, ಮರಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.