ಸಾರಾಂಶ
ಖಾಲಿ ನಿವೇಶನಗಳಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಆಸ್ತಿ ಮಾಲೀಕರಿಗೆ ದಂಡ ವಿಧಿಸಬೇಕು ಅಥವಾ ಅದಕ್ಕೆ ತಗಲುವ ವೆಚ್ಚವನ್ನು ನಿವೇಶನದ ಆಸ್ತಿ ತೆರಿಗೆಯಲ್ಲಿ ಸೇರಿಸಿ ವಸೂಲಿ ಮಾಡುವಂತೆ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಖಾಲಿ ನಿವೇಶನಗಳಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಆಸ್ತಿ ಮಾಲೀಕರಿಗೆ ದಂಡ ವಿಧಿಸಬೇಕು ಅಥವಾ ಅದಕ್ಕೆ ತಗಲುವ ವೆಚ್ಚವನ್ನು ನಿವೇಶನದ ಆಸ್ತಿ ತೆರಿಗೆಯಲ್ಲಿ ಸೇರಿಸಿ ವಸೂಲಿ ಮಾಡುವಂತೆ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಸೋಮವಾರ ಯಲಹಂಕ ಏರ್ಪೋರ್ಟ್ ರಸ್ತೆಯಲ್ಲಿ ತಪಾಸಣೆ ನಡೆಸಿದ ಅವರು, ಪುಲಿಕೇಶಿನಗರ, ಬ್ಯಾಟರಾಯನಪುರ ಮತ್ತು ಸರ್ವಜ್ಞನಗರ ವಿಭಾಗಗಳ ಗಡಿ ಪ್ರದೇಶಗಳಲ್ಲಿ ಬಹುತೇಕ ಖಾಲಿ ನಿವೇಶನಗಳು ತಕರಾರು ನಿವೇಶನಗಳಾಗಿವೆ. ಮಾಲೀಕರು ಲಭ್ಯವಿಲ್ಲದ ಕಾರಣ, ನಿವೇಶನಗಳಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ ಅದಕ್ಕೆ ತಗಲುವ ವೆಚ್ಚವನ್ನು ನಿವೇಶನದ ಆಸ್ತಿ ತೆರಿಗೆಯಲ್ಲಿ ಸೇರಿಸಿ ತಕರಾರು ಪ್ರಕರಣ ಇತ್ಯರ್ಥಗೊಂಡ ನಂತರ ಆಸ್ತಿ ಮಾಲೀಕರಿಂದ ವಸೂಲಿ ಮಾಡಬೇಕು ಎಂದು ಸೂಚಿಸಿದರು.
ಜಕ್ಕೂರು ರಸ್ತೆಯಲ್ಲಿ ಕಸ ಹಾಗೂ ಕಟ್ಟಡ ಅವಶೇಷಗಳನ್ನು ತೆರವುಗೊಳಿಸಲು ಸ್ವಚ್ಛತಾ ಅಭಿಯಾನವನ್ನು ತಕ್ಷಣ ಹಮ್ಮಿಕೊಳ್ಳಬೇಕು. ಖಾಲಿ ಜಾಗಗಳಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ ಮಾಲೀಕರಿಂದಲೇ ದಂಡ ಹಾಗೂ ಸ್ವಚ್ಛತಾ ಶುಲ್ಕವನ್ನು ವಿಧಿಸಿ ಆಸ್ತಿ ತೆರಿಗೆಗೆ ಸೇರಿಸುವಂತೆ ಅಧಿಕಾರಿಗಳಿಗೆ ಆಯುಕ್ತ ಸುನೀಲ್ ನಿರ್ದೇಶನ ನೀಡಿದರು.;Resize=(128,128))