ನಿಡಗುಂದಿಯಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ

| Published : Dec 05 2024, 12:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿರುವ ಹೊಟೇಲ್, ಪಾನಶಾಪ್, ಗ್ಯಾರೇಜ್, ಕಿರಾಣಿ ಸೇರಿದಂತೆ ಹಲವಾರು ಅಂಗಡಿಗಳನ್ನು ತಹಸೀಲ್ದಾರ್ ಎ.ಡಿ ಅಮರವಾಡಗಿ ಹಾಗೂ ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಸಿಪಿಐ ಅಶೋಕ ಚವ್ಹಾಣ, ಪಿಎಸ್‌ಐ ಶಿವಾನಂದ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದರು

ಕನ್ನಡಪ್ರಭ ವಾರ್ತೆ ನಿಡಗುಂದಿ:

ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿರುವ ಹೊಟೇಲ್, ಪಾನಶಾಪ್, ಗ್ಯಾರೇಜ್, ಕಿರಾಣಿ ಸೇರಿದಂತೆ ಹಲವಾರು ಅಂಗಡಿಗಳನ್ನು ತಹಸೀಲ್ದಾರ್ ಎ.ಡಿ ಅಮರವಾಡಗಿ ಹಾಗೂ ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಸಿಪಿಐ ಅಶೋಕ ಚವ್ಹಾಣ, ಪಿಎಸ್‌ಐ ಶಿವಾನಂದ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.ಹೈಕೋರ್ಟ್‌ ಆದೇಶದ ಪ್ರಕಾರ ಸಾರ್ವಜನಿಕ ರಸ್ತೆ ಅತಿಕ್ರಮಿತ ಸ್ಥಳಗಳನ್ನು ತೆರುವುಗೊಳಿಸಿ ಸುಗಮ ಸಂಚಾರಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇಲ್ಲಿನ ಅಂಗಡಿ ಮಾಲಿಕರಿಗೆ ಕಳೆದ ಎರಡ್ಮೂರು ಬಾರಿ ನೋಟಿಸ್ ಕೂಡ ನೀಡಲಾಗಿತ್ತು. ಅದರಂತೆ ಬುಧವಾರ ತೆರುವು ಕಾರ್ಯಾಚರಣೆ ನಡೆಸಲಾಗಿದೆ. ಹಲವಾರು ಅಂಗಡಿಕಾರರು ತಾವಾಗಿಯೇ ಅಂಗಡಿ ತೆರುವು ಮಾಡಿಕೊಳ್ಳುತ್ತಿದ್ದಾರೆ. ನಿತ್ಯ ಸಾವಿರಾರು ವಾಹನಗಳು ಈ ರಸ್ತೆಯ ಮೇಲೆ ಸಂಚರಿಸುತ್ತವೆ. ರಸ್ತೆ ಎಡ, ಬಲದಲ್ಲಿ ಅನೇಕ ಅಂಗಡಿಗಳ ನಿರ್ಮಾಣದಿಂದ ವಾಹನ ಸವಾರರು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಹರಸಾಹಸಪಡುವಂತಾಗಿತ್ತು. ಅತಿಕ್ರಮಣ ತೆರವು ಕಾರ್ಯದಿಂದ ಸಂಚಾರಕ್ಕೆ ಅನುಕೂಲವಾಗಿದೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.ಪ.ಪಂ ಸಿಬ್ಬಂದಿ, ಪೋಲಿಸ್ ಸಿಬ್ಬಂದಿ, ಹೆಸ್ಕಾಂ ಸಿಬ್ಬಂದಿ ಸೇರಿದಂತೆ ಇತರರಿದ್ದರು.