ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

| Published : Oct 06 2025, 01:01 AM IST

ಸಾರಾಂಶ

ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ವಿಶೇಷ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ವಿಶೇಷ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಳಿಸಲಾಯಿತು.

ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ ಆವರು ಅಧ್ಯಕ್ಷತೆ ವಹಿಸಿ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ, ದೇಶಪ್ರೇಮ, ಜವಾಬ್ದಾರಿಯನ್ನು ಬೆಳೆಸುತ್ತದೆ ಎಂದು ಕಿವಿ ಮಾತನ್ನು ಹೇಳಿದರು.

ಸಮಾರೋಪ ಭಾಷಣಕಾರರಾಗಿ ಆಗಮಿಸಿದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುಕ್ಕಾಟಿರ ರವಿ ಚಿಯಣ್ಣನವರು ಶಿಬಿರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ, ಸೇವಾ ಮನೋಭಾವ, ನೈತಿಕ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮ್ಯಾನೇಜರ್ ಕುಟ್ಟಂಡ ಗಣಪತಿಯವರು ಶಿಬಿರವು ವಿದ್ಯಾರ್ಥಿಗಳಲ್ಲಿ ಸ್ವಯಂಶಿಸ್ತು ಹಾಗೂ ಗ್ರಾಮೀಣ ಭಾಗದ ಜನತೆ ಒಟ್ಟಿಗೆ ಬೆರೆಯುವುದರಿಂದ ಏಕತೆಯ ಮನೋಭಾವ ಬೆಳೆಸುತ್ತದೆ ಎಂದು ಹೇಳಿದರು.

ಒಂದು ವಾರ ಆಯೋಜಿಸಿದ ವಾರ್ಷಿಕ ವಿಶೇಷ ಶಿಬಿರದ ಕಾರ್ಯಕ್ರಮದಲ್ಲಿ ಹಲವು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನವನ್ನು ಆಯೋಜಿಸಲಾಗಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ದೇವಕಿಯವರು ಸ್ವಾಗತಿಸಿ ಕಾರ್ಯಕ್ರಮದಲ್ಲಿ ಏಳು ದಿನದ ವಿಶೇಷ ವಾರ್ಷಿಕ ಶಿಬಿರದ ಕಾರ್ಯ ಚಟುವಟಿಕೆಗಳನ್ನು ಕುರಿತು ಕಾರ್ಯಕ್ರಮ ಅಧಿಕಾರಿಗಳಾದ ದಮಯಂತಿ ಅವರು ವರದಿಯನ್ನು ಮಂಡಿಸಿ ಉಪನ್ಯಾಸಕಿ ಸರೋಜಿನಿ ವಂದಿಸಿದರು.