ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ನೆರವೇರಿತು.
ಹೆಬ್ರಿ: ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ನೆರವೇರಿತು. ಕಾರ್ಯಕ್ರಮದ ಮುನ್ನ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರುಬೀಡು ಎಂ.ಡಿ. ಅಧಿಕಾರಿ ಅವರ ಪುತ್ಥಳಿಗೆ ಪಡುಪರ್ಕಳ ಹರೀಶ್ ಶೆಟ್ಟಿ ಮಾಲಾರ್ಪಣೆ ಮಾಡಿದರು.ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ ಹಾಗೂ ಹಳೆ ವಿದ್ಯಾರ್ಥಿ ರವಿರಾಜ್ ಉಪಾಧ್ಯಾಯ ಕಲೋತ್ಸವವನ್ನು ಉದ್ಘಾಟಿಸಿ, ಪ್ರತಿಭೆಗೆ ತಕ್ಕ ವೇದಿಕೆ ಸಿಕ್ಕಾಗ ಮಕ್ಕಳ ಸಾಮರ್ಥ್ಯ ವಿಕಸನಗೊಳ್ಳುತ್ತದೆ. ಪ್ರತಿಭಾ ಕಾರಂಜಿ ಅದರತ್ತ ದಾರಿತೋರಿಸುವ ಕಾರ್ಯಕ್ರಮ ಎಂದು ಹೇಳಿದರು.
ಶತಮಾನೋತ್ಸವ ಸಂಭ್ರಮದಲ್ಲಿರುವ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಲು ಸಮಾಜಸೇವಕ, ಮುಂಬೈ ಉದ್ಯಮಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಹರೀಶ್ ಶೆಟ್ಟಿ ಕರೆ ನೀಡಿದರು. ಶಾಲೆಯ ಪ್ರಗತಿ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿಗಳ ಒಟ್ಟಿನ ಪರಿಶ್ರಮದ ಫಲ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಎಸ್‌ಡಿಎಂಸಿ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಲ್ಲಬೆಟ್ಟು ದರ್ಕಾಸು ಶಂಕರ ನಾರಾಯಣ ನಾಯಕ್ ಸೇರಿದಂತೆ ಹಲವರನ್ನು ಗೌರವಿಸಲಾಯಿತು.ಸಂಸ್ಥೆಯ ಉಪಾಧ್ಯಕ್ಷ ಹರೀಶ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾರವಿ ಶೆಟ್ಟಿ, ಸಿಆರ್‌ಪಿ ರಾಘವೇಂದ್ರ ಆಚಾರ್ಯ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಶಿಕ್ಷಕ ಸುದರ್ಶನ್ ಶೆಟ್ಟಿ ನಿರೂಪಣೆ ಮಾಡಿದರು. ಶಿಕ್ಷಕಿ ಶೃತಿ ಆಚಾರ್ಯ ವಂದಿಸಿದರು.