ಸಾರಾಂಶ
ಮಕ್ಕಳಲ್ಲಿ ಪಠ್ಯ ಚಟುವಟಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ. ತಂದೆತಾಯಿಗಳು ಮಕ್ಕಳಿಗೆ ಮೊಬೈಲ್ ನೀಡದೆ ಪಠ್ಯ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹೆಸರು ತರುವಂತಹ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದೊಡ್ಡೇರಿ ತಾಂಡವೇಶ್ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ದೊಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಟ್ಟನವಿಲೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ದೊಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಟ್ಟನವಿಲೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ದೊಡ್ಡೇರಿ ತಾಂಡವೇಶ್ ಬಹುಮಾನ ವಿತರಣೆ ಮಾಡಿದರು.ನಂತರ ಮಾತನಾಡಿ, ಮಕ್ಕಳಲ್ಲಿ ಪಠ್ಯ ಚಟುವಟಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ. ತಂದೆತಾಯಿಗಳು ಮಕ್ಕಳಿಗೆ ಮೊಬೈಲ್ ನೀಡದೆ ಪಠ್ಯ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹೆಸರು ತರುವಂತಹ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯೆ ಶೋಭಾ, ಸಹ ಶಿಕ್ಷಕಿ ಅನಿತಾ, ರಾಜಮ್ಮ, ಗ್ರಾಮಪಂಚಾಯಿತಿ ಸದಸ್ಯ ಪ್ರದೀಪ್ ಮತ್ತಿತರಿದ್ದರು.