ಸಿಎಂ ಆದ್ರೂ ಬೊಮ್ಮಾಯಿ ಕೊಡುಗೆ ಶೂನ್ಯ: ಸಚಿವ ಶಿವಾನಂದ ಪಾಟೀಲ್

| Published : Nov 07 2024, 12:30 AM IST

ಸಾರಾಂಶ

ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಮುಖ್ಯಮಂತ್ರಿ ಆದ್ರೂ ತಾವು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

ಶಿಗ್ಗಾಂವಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರು. ಸತತವಾಗಿ ನಾಲ್ಕು ಬಾರಿ ಗೆದ್ದು ಪ್ರಮುಖ ಖಾತೆಗಳನ್ನು ನಿರ್ವಹಿಸಿದರೂ ಕ್ಷೇತ್ರದ ಅಭಿವೃದ್ಧಿ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದ ಅವರು, ತಾಲೂಕಿನಲ್ಲಿ ಸಂಚರಿಸಿದಾಗ ಕ್ಷೇತ್ರದ ಸಮಸ್ಯೆಗಳು ಗೋಚರಿಸುತ್ತಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈ ಬಲಪಡಿಸಲು ಪಕ್ಷದ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎ. ಖಾದ್ರಿ, ಮಂಜುನಾಥ ಮಣ್ಣನವರ ಸೇರಿದಂತೆ ಹಲವಾರು ಮುಖಂಡರು ಇದ್ದರು.