ನೆರೆಪೀಡಿತ ಜಿಲ್ಲೆಗಳಲ್ಲಿಂದು ಸಿದ್ದು ವೈಮಾನಿಕ ಸಮೀಕ್ಷೆ

| Published : Sep 30 2025, 01:00 AM IST

ನೆರೆಪೀಡಿತ ಜಿಲ್ಲೆಗಳಲ್ಲಿಂದು ಸಿದ್ದು ವೈಮಾನಿಕ ಸಮೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳ ಮಳೆ, ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

- ವಿಜಯಪುರ, ಯಾದಗಿರಿ, ಬೀದರ್‌, ಕಲಬುರಗಿ ಭೇಟಿ

---

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳ ಮಳೆ, ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು 11.40ರ ವೇಳೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2 ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ ಕಲಬುರಗಿ ನಗರದ ಐವಾನ್‌-ಇ-ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ.

ಭೋಜನ ವಿರಾಮ ಬಳಿಕ ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.