ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ

| Published : Oct 16 2024, 12:44 AM IST

ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್‌.ವಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ಸಿಎಂ ಆಗಮಿಸಲು ಭರವಸೆ ನೀಡಿದ್ದು, ಅ.17ರಂದು ಸರ್ಕಾರದ ವತಿಯಿಂದ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ನಾಯಕ ಸಮುದಾಯದವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್‌.ವಿ ಚಂದ್ರು ಅವರು ಮನವಿ ಮಾಡಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಜಿಲ್ಲಾಡಳಿತ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಒತ್ತಾಯಿಸಿ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಾಯಿತು. ನಂತರ ಶಾಸಕರಾದ ಎ.ಆರ್‌. ಕೃಷ್ಣಮೂರ್ತಿ ಅವರು ಸಚಿವ ಎಚ್‌.ಸಿ. ಮಹದೇವಪ್ಪ ಹಾಗೂ ಸಂಸದ ಸುನೀಲ್‌ ಬೋಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌, ಸಚಿವರಾದ ಸತೀಶ್‌ ಜಾರಕಿಹೋಳಿ ಅವರೊಂದಿಗೆ ಜಿಲ್ಲೆಯಲ್ಲಿ ವಾಲ್ಮೀಕಿ ಜಯಂತಿ ಬಹಿಷ್ಕರಿಸಿರುವ ಹಾಗೂ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಸಂಬಂಧ ವಿಚಾರ ಚರ್ಚಿಸಿದ ನಂತರ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ತಾವೇ ಗುದ್ದಲಿ ಪೂಜೆ ನೆರವೇರಿಸಲು ತಿಳಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಚಾಮರಾಜನಗರಕ್ಕೆ ಆಗಮಿಸಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಭರವಸೆ ನೀಡಿದ್ದು, ನಾಯಕ ಸಮುದಾಯದವರು ಸರ್ಕಾರದ ವತಿಯಿಂದ ನಡೆಸುವ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ವಾಲ್ಮೀಕಿ ಜಯಂತಿ ಬಹಿಷ್ಕಾರಿಸುವುದು ಗೌರವವಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ರಮೇಶ್‌, ಬಂಗಾರು, ಮಹೇಶ್‌, ರಾಜಣ್ಣ, ರಂಗನಾಥ್‌, ಸುರೇಶ್ ನಾಗ್ ಇದ್ದರು.