ರಾಮನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಹಣ ಇಲ್ಲವೆಂದು ಗೊತ್ತಿದೆ. ಆದರೂ ಬಿಜೆಪಿ ಬಲಿಷ್ಠವಾಗಿರುವ ಕಡೆ ಹೋಗಿ ಸುಳ್ಳು ಆಶ್ವಾಸನೆ ಕೊಟ್ಟು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಟೀಕಿಸಿದರು
ರಾಮನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಹಣ ಇಲ್ಲವೆಂದು ಗೊತ್ತಿದೆ. ಆದರೂ ಬಿಜೆಪಿ ಬಲಿಷ್ಠವಾಗಿರುವ ಕಡೆ ಹೋಗಿ ಸುಳ್ಳು ಆಶ್ವಾಸನೆ ಕೊಟ್ಟು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಕರಾವಳಿ ಪ್ರದೇಶ, ಉತ್ತರ ಕರ್ನಾಟಕ ಪ್ರದೇಶಗಳು ಬಿಜೆಪಿ ಭದ್ರಕೋಟೆಯಾಗಿದೆ. ಅಲ್ಲಿ ಹಣವೇ ಲಭ್ಯವಾಗುತ್ತಿಲ್ಲ. ಅಲ್ಲಿಗೆ ಹೋಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇವಲ ಘೋಷಣೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಸಿದ್ದರಾಮಯ್ಯ ಅವರಿಗೆ ರಾಜಕೀಯ ಮರುಜೀವ ಕೊಟ್ಟಿರುವುದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು. ಅಲ್ಲಿ ಬಿಜೆಪಿ ಸರ್ಕಾರವಿದ್ದಾಗ ಐದು ನೀರಾವರಿ ಯೋಜನೆಗಳು ಪೂರ್ಣಗೊಂಡಿತು. ಆದರೆ, ಸಿದ್ದರಾಮಯ್ಯ ಐದು ವರ್ಷಗಳ ಕಾಲ ವಿರೋಧ ಪಕ್ಷದ ನಾಯಕರಾಗಿದ್ದರು. ಮತ್ತು 8 ವರ್ಷ ಮುಖ್ಯಮಂತ್ರಿಯಾಗಿದ್ದರು ಒಂದು ರುಪಾಯಿ ಬಿಡುಗಡೆ ಮಾಡಲಿಲ್ಲ. ತಾವು ಮುಖ್ಯಮಂತ್ರಿಯಾಗಲು ಕಾರಣವಾದ ಬಾಗಲಕೋಟೆಗೆ ಹಣ ಮಂಜೂರು ಮಾಡಲಿಲ್ಲ ಎಂದು ಟೀಕಿಸಿದರು.
ಈ ಸರ್ಕಾರದಲ್ಲಿ ಹಣ ಇಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಪ್ರತಿ ತಿಂಗಳು ಹಣ ಬಿಡುಗಡೆಯಾಗುತ್ತಿಲ್ಲ. ಹೊಸ ಯೋಜನೆ ಘೋಷಣೆ ಮಾಡುವ ಮುನ್ನ ಹಳೆಯ ಯೋಜನೆಗಳಿಗೆ ಹಣ ಕೊಡಿ.ಕಾಂಗ್ರೆಸ್ ಸರ್ಕಾರ ದಪ್ಪ ಚರ್ಮದ ಸರ್ಕಾರ. ವಿರೋಧ ಪಕ್ಷದ ಮಾತು ಅವರ ಕಿವಿಗೂ ಹೋಗುತ್ತಿಲ್ಲ.
ಸರ್ಕಾರ ಈ ಕೂಡಲೇ ಶ್ವೇತ ಪತ್ರ ಹೊರಡಿಸಬೇಕೆಂದು ಒತ್ತಾಯಿಸಿದರು.ರಾಜ್ಯದಲ್ಲಿ ಈ ವರ್ಷ ಮಳೆ ಇಲ್ಲ. ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಸುಣ್ಣದಂತೆ ಮಾಡದೇ ಒಟ್ಟಾರೆ ಎಲ್ಲಾ 224 ಕ್ಷೇತ್ರಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಕೂಡಲೇ ಘೋಷಣೆ ಮಾಡಬೇಕು. ಎಚ್.ಕೆ. ಪಾಟೀಲರು ರಾಜೀನಾಮೆ ನೀಡುತ್ತೇನೆ ಎಂದರೆ ಅವರ ತಾಲೂಕನ್ನುಬರಪೀಡಿತ ಎಂದು ಘೋಷಣೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಮುರುಗೇಶ್ ನಿರಾಣಿ ಟೀಕಿಸಿದರು.
ಘೋಷಣೆ ಮಾಡಲು ಹಣ ಖರ್ಚಾಗಲ್ಲ :ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ರಾಜ್ಯದ ಖಜಾನೆಯಲ್ಲಿ ಹಣ ಇಲ್ಲ, ಆರ್ಥಿಕ ಇಲಾಖೆಗೆ ಹಣ ಬಿಡುಗಡೆ ಮಾಡಲು ಸಂಕಟ ಆಗಿದೆ. ಆದರೆ, ಘೋಷಣೆ ಮಾಡಲು ಯಾವುದೇ ಹಣ ಖರ್ಚಾಗಲ್ಲ. ಅದಕ್ಕಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಖಾಲಿ ಘೋಷಣೆ ಮಾಡಿಕೊಂಡು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿಗಳ ಹೆಲಿಕಾಪ್ಟರ್, ವಿಶೇಷ ವಿಮಾನದಲ್ಲಿ ಓಡಾಡೋದು ಕೂಡಾ ಸರ್ಕಾರಕ್ಕೆ ಹೊರೆಯಾಗಿದೆ.ಮುಂದಿನ ದಿನಗಳಲ್ಲಿ ಅಧಿಕಾರಿಗಳಿಗೆ ಸಂಬಳ ಕೊಡೋದು ಕಷ್ಟ ಇದೆ. ಇದು ಘೋಷಣೆ ಸರ್ಕಾರ, ಕೆಲಸ ಮಾಡೋ ಸರ್ಕಾರ ಅಲ್ಲ. ಸರ್ಕಾರ ಬರ ಘೋಷಣೆಯನ್ನೂ ಸರಿಯಾಗಿ ಮಾಡಿಲ್ಲ. ಸರ್ಕಾರ ಆಡಳಿತ ಹಳಿ ತಪ್ಪಿದೆ ಎಂದು ಪಾಟೀಲ್ ಕಿಡಿಕಾರಿದರು.
23ಕೆಆರ್ ಎಂಎನ್ 5.ಜೆಪಿಜಿಮಾಜಿ ಸಚಿವ ಮುರುಗೇಶ್ ನಿರಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.