ಸಾರಾಂಶ
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಗಣರಾಜ್ಯೋತ್ಸವ ಸಮಾರಂಭದಲ್ಲಿ ಹರ್ಷವರ್ಧನ್ ಸಂವಿಧಾನದ ಪೀಠಿಕೆಯನ್ನು ಕಂಠಪಾಠ ಮಾಡಿ ವೇದಿಕೆಯಲ್ಲಿ ಹೇಳಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್( ಟ್ವೀಟರ್) ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಪುಟ್ಟಬಾಲಕನ ತೊದಲು ನುಡಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಕೇಳುವುದೇ ಒಂದು ಖುಷಿ. ಈ ಹುಡುಗನಂತೆ ಪ್ರತಿಯೊಬ್ಬರ ಮನದಲ್ಲೂ ಸಂವಿಧಾನದ ಪ್ರತಿಪದ ಅಚ್ಚಾಗಬೇಕು. ಆಗ ಮಾತ್ರ ಸಮಾನತೆ, ಬಹುತ್ವದ ತಳಹದಿಯ ಮೇಲೆ ಬಲಿಷ್ಠ ಭಾರತ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.ಪೊಟೋ೨೯ಸಿಪಿಟಿ೧:ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ವಿದ್ಯಾರ್ಥಿ ಹರ್ಷವರ್ಧನ್ ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು.