21ಕ್ಕೆ ಸಿಎಂ ಆಗಮನ: ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ

| Published : Jul 11 2025, 01:47 AM IST

ಸಾರಾಂಶ

ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಸವಲತ್ತು ವಿತರಣೆಗೆ ಜು.21ರಂದು ಸಿಎಂ ಆಗಮನ ಖಚಿತವಾದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದ ಸ್ಥಳ ಹಾಗೂ ಹೆಲಿಪ್ಯಾಡ್‌ ಸೇರಿದಂತೆ ವಿವಿಧ ಅಗತ್ಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಪಾವಗಡ

ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಸವಲತ್ತು ವಿತರಣೆಗೆ ಜು.21ರಂದು ಸಿಎಂ ಆಗಮನ ಖಚಿತವಾದ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ , ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಎಸ್ಪಿ ಅಶೋಕ್‌, ಜಿಪಂ ಸಿಇಒ ಪ್ರಭು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದ ಸ್ಥಳ ಹಾಗೂ ಹೆಲಿಪ್ಯಾಡ್‌ ಸೇರಿದಂತೆ ವಿವಿಧ ಅಗತ್ಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಗುರುವಾರ ನಗರದ ಸರ್ಕಾರಿ ಪಿಯು ಕಾಲೇಜು,ಸಮೀಪ ಮಹಾತ್ಮಗಾಂಧಿ ದೊಡ್ಡ ಕ್ರೀಡಾಂಗಣಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಿಎಂ ಆಗಮನ, ನಿರ್ಗಮನ, ಜನರ ಸೇರುವಿಕೆ, ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿದ್ದತೆ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒರಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ಬಳಿಕ ನಾಗಲಮಡಿಕೆ ಕ್ರಾಸ್ ನಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಬಳಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಗೆ ಚಾಲನೆ ಮತ್ತು SC ಮತ್ತು ST ಹಾಸ್ಟೆಲ್ ಲೋಕಾರ್ಪಣೆ ಮಾಡುವ ಕುರಿತಾಗಿ ಸ್ಥಳ ಪರಿಶೀಲನೆ ನಡೆಸಿದರು.

ಗುರುಭವನ ಪಕ್ಕದ ಶಾಲಾ ಮೈದಾನದಲ್ಲಿ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ಸ್ಥಳ ಪರಿಶೀಲಿಸಿ,ಸೂಕ್ತ ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು. ನಂತರ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರ ತಾಲೂಕಿನ ಹನುಮಂತನಹಳ್ಳಿಯ ನಿವಾಸಕ್ಕೆ ತೆರಳಿ ಊಟದ ವ್ಯವಸ್ಥೆಗೆ ಸಿದ್ದತೆ ಬಗ್ಗೆ ಮಾಜಿ ಸಚಿವರ ಜತೆ ಶಾಸಕರೊಂದಿಗೆ ಅಧಿಕಾರಿಗಳು ಚರ್ಚಿಸಿದರು.