ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅ.12ರಂದು ನಿಗದಿಪಡಿಸಲಾಗಿದ್ದ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ರದ್ದುಪಡಿಸಲಾಗಿದೆ.

ಮಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅ.12ರಂದು ನಿಗದಿಪಡಿಸಲಾಗಿದ್ದ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ರದ್ದುಪಡಿಸಲಾಗಿದೆ. ತುರ್ತು ಕೆಲಸದ ನಿಮಿತ್ತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ನವದೆಹಲಿಗೆ ತೆರಳಬೇಕಾಗಿರುವುದರಿಂದ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವಕ್ಕೆ ನೀಡಬೇಕಾಗಿದ್ದ ಅವರ ಭೇಟಿಯನ್ನು ಮುಂದೂಡಲಾಗಿದೆ ಎಂದು ಕ್ಷೇತ್ರಾಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.