ಸಿಎಂ ಬದಲಾವಣೆ- ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ: ಸಚಿವ ಚಲುವರಾಯಸ್ವಾಮಿ

| N/A | Published : Mar 10 2025, 12:19 AM IST / Updated: Mar 10 2025, 11:50 AM IST

ಸಿಎಂ ಬದಲಾವಣೆ- ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ: ಸಚಿವ ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು.

 ಮದ್ದೂರು : ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು.

ತಾಲೂಕಿನ ಸೋಮನಹಳ್ಳಿ ಸಮೀಪದ ಕೆಸ್ತೂರು ಕ್ರಾಸ್‌ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸಿದ್ದು ಕಂಫರ್ಟ್ಸ್ ಉದ್ಘಾಟನೆ ವೇಳೆ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಸಿಎಂ ಬದಲಾವಣೆ ಸಂದರ್ಭ ಬಂದರೆ ಈ ಬಗ್ಗೆ ಹೈಕಮಾಂಡ್ ಮಧ್ಯಪ್ರವೇಶ ಮಾಡಿ, ವರಿಷ್ಠರು ಚರ್ಚೆ ನಡೆಸಿ ತೀರ್ಮಾನಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಯಶಸ್ವಿ ಆಡಳಿತ ನಡೆಸುತ್ತಿದೆ. ಇದರಿಂದ ಬಿಜೆಪಿ ನಾಯಕರಿಗೆ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಸುಖ, ಸುಮ್ಮನೆ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಹುದ್ದೆ ಸಂಬಂಧ ಕಾಂಗ್ರೆಸ್ ನಾಯಕರ ಹೇಳಿಕೆ ಮತ್ತು ಪ್ರತಿ ಹೇಳಿಕೆ ಬಗ್ಗೆ ಅತೃಪ್ತಿ ಹೊರ ಹಾಕಿರುವುದು ಸಹಜ. ನಾಯಕರು ಒಗ್ಗಟ್ಟು ಕಾಪಾಡಿಕೊಂಡು ಹೋಗಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಗಳಲ್ಲಿ ಜನ ನಮ್ಮನ್ನು ತಿರಸ್ಕರಿಸುತ್ತಾರೆ ಎಂದು ನಮ್ಮ ನಾಯಕರಿಗೆ ಖರ್ಗೆ ಅವರು ಕಿವಿಮಾತು ಹೇಳಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಕೃಷಿ ವಿವಿಗೆ ಮೂಲ ಸೌಲಭ್ಯಗಳೊಂದಿಗೆ ಹೊಸ ಆವಿಷ್ಕಾರಗಳನ್ನು ಜಾರಿಗೆ ತರಲು ಸಹಕಾರಿಯಾಗಿದೆ ಎಂದರು.

ಈ ವೇಳೆ ಶಾಸಕರಾದ ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ವಕ್ತಾರ ಚಿದಂಬರ್, ಮಾಲೀಕ ಪ್ರಸನ್ನ, ಚಂದ್ರಕಲಾ ಪ್ರಸನ್ನ, ವಿನುತಾ ಕೆ.ಎಂ.ಉದಯ್, ಯೋಗೇಶ್ ಪ್ರಸನ್ನ, ಸಿ.ಮೂರ್ತಿ, ವರುಣ ಹಾಗೂ ರಾಜೇಶ್ ಇದ್ದರು.