ಸಾರಾಂಶ
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ
ಅಥಣಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ. ಆದರೆ, ಸಿಎಂ ಬದಲಾವಣೆ ಎಂಬುದು ಹಗಲುಗನಸು ಎಂದು ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಚಿವರು ಮತ್ತು ಶಾಸಕರು ತಮ್ಮ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಸಿಎಂ ಮತ್ತು ಡಿಸಿಎಂ, ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಾಮಾನ್ಯ. ಸಿಎಂ ಬದಲಾವಣೆ ಎಂಬುದು ಕೇವಲ ಊಹಾಪೋಹವಾಗಿದೆ ಎಂದರು.