ಅರಸೀಕೆರೆಗೆ ಸಿಎಂ ಡಿಸಿಎಂ ಡಿಕೆ ಶಿವಕುಮಾರ್

| Published : May 11 2025, 01:25 AM IST

ಸಾರಾಂಶ

ಮೇ 30ರ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಂತ್ರಿಗಳು ನಗರಕ್ಕೆ ಆಗಮಿಸಲಿದ್ದಾರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿನಿಯರಿಂಗ್‌ ಕಾಲೇಜು ಕೇಂದ್ರ ಸರ್ಕಾರ ಈಗಾಗಲೇ 240 ವಿದ್ಯಾರ್ಥಿಗಳಿಗೆ ನಾಲ್ಕು ಕೋರ್ಸ್‌ಗೆ ಅರ್ಜಿ ಕರೆಯಲು ಅನುಮತಿ ನೀಡಿದೆ ಎಂದು ವಿವರಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮೇ 30ರ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಂತ್ರಿಗಳು ನಗರಕ್ಕೆ ಆಗಮಿಸಲಿದ್ದಾರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದಲ್ಲಿ ನಿರ್ಮಾಣವಾಗುತ್ತಿರುವ ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿನಿಯರಿಂಗ್‌ ಕಾಲೇಜು ಕೇಂದ್ರ ಸರ್ಕಾರ ಈಗಾಗಲೇ 240 ವಿದ್ಯಾರ್ಥಿಗಳಿಗೆ ನಾಲ್ಕು ಕೋರ್ಸ್‌ಗೆ ಅರ್ಜಿ ಕರೆಯಲು ಅನುಮತಿ ನೀಡಿದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಹಿಂದೆ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಪಡೆದು ಕಾಲೇಜಿಗೆ ಅಡ್ಮಿಶನ್ ಆಗಬಹುದಾಗಿದೆ ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಂತೆ ಮೈದಾನದಲ್ಲಿ ನಿರ್ಮಾಣವಾಗಿರುವ ತರಕಾರಿ ಮಾರುಕಟ್ಟೆಯನ್ನು ಹಾಗೂ ಈಜುಕೊಳದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು.

ಈಗ ತರಕಾರಿ ಮಾರುಕಟ್ಟೆ ಇರುವ ಜಾಗದಲ್ಲಿ ಆಧುನಿಕ ಫುಡ್ ಕೋರ್ಟ್‌ ಅನ್ನು ಮೂರು ಅಂತಸ್ತಿನಲ್ಲಿ ನಿರ್ಮಿಸಲಾಗುವುದು. ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿಂಡಿಗಳನ್ನು ತಿಂದು ಆರೋಗ್ಯಕೆಡಿಸಿಕೊಳ್ಳುವ ಬದಲು ಇಲ್ಲಿ ಎಲ್ಲಾ ತಿಂಡಿಗಳು ಮಾಡಲು ಅವಕಾಶ ನೀಡಲಾಗುವುದು. ಈ ಫುಡ್‌ಕೋರ್ಟ್‌ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ವಿವರಿಸಿದರು.

ಈಗ ಇರುವ ಬಸ್ ನಿಲ್ದಾಣದ ಸ್ಥಳದಲ್ಲಿಯೇ ಪಕ್ಕದ ಪಶುವೈದ್ಯ ಶಾಲೆ ಸೇರಿಸಿಕೊಂಡು ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಶಮಿವುಲ್ಲಾ ಇದ್ದರು.