ಭೋವಿ ಗುರುಪೀಠಕ್ಕೆ ಸಿಎಂ, ಡಿಸಿಎಂ ಭೇಟಿ

| Published : May 04 2024, 12:37 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಲಕೋಟೆಯ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಲಕೋಟೆಯ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದರು.ಈ ವೇಳೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಸ್ವಾಮೀಜಿ, ಪಂಚಮಸಾಲಿ ಗುರುಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಜಗದ್ಗುರು ಕುಂಬಾರ ಗುಂಡಯ್ಯ ಸ್ವಾಮೀಜಿ, ಮೇದಾರ ಗುರುಪೀಠದ ಇಮ್ಮಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ, ಇರಕಲ್ ಮಠದ ಬಸವ ಪ್ರಸಾದ ಶರಣರ ಆಶೀರ್ವಾದ ಪಡೆದರು.

ಈ ವೇಳೆ ಶಿವಾನಂದ ಪಾಟೀಲ, ಆರ್.ವಿ. ತಿಮ್ಮಾಪೂರ, ಶಾಸಕರಾದ ಎಚ್.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ನಂಜಯ್ಯ ಹಿರೇಮಠ, ಮಾಜಿ ಶಾಸಕಿ ಸೌಮ್ಯರೆಡ್ಡಿ, ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಉಪಸ್ಥಿತರಿದ್ದರು.