ಮಾಧ್ಯಮದ ಎದುರು ದೇಶಪಾಂಡೆಸಿಎಂ ಆಸೆ ಹೇಳಬಾರದಿತ್ತು: ಡಿ.ಕೆ.ಶಿವಕುಮಾರ್‌

| Published : Sep 03 2024, 01:32 AM IST

ಮಾಧ್ಯಮದ ಎದುರು ದೇಶಪಾಂಡೆಸಿಎಂ ಆಸೆ ಹೇಳಬಾರದಿತ್ತು: ಡಿ.ಕೆ.ಶಿವಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಆಕಾಂಕ್ಷಿ ಎಂಬ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೆಗೆ ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶಪಾಂಡೆ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡಲಾಗುವುದು ಎಂದು ಹೇಳಿದರು. ಮುಡಾ ವಿಚಾರದಲ್ಲಿ ನ್ಯಾಯಾಲಯದಲ್ಲಿ ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದು, ಅವರ ಕೆಲಸ ಮಾಡುತ್ತಾರೆ ಎಂದರು.ಇದೇ ವೇಳೆ ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಹೇಳಿಕೆಗೆ ಉತ್ತರಿಸಿ, ಕಾಂಗ್ರೆಸ್‌ನಲ್ಲಿದ್ದು, ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲದರಲ್ಲೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ ಎಂದು ವ್ಯಂಗ್ಯವಾಡಿದರು.

ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಗಮನಿಸಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.