ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಭಾಗಿಯಾಗಿಯಾಗಿ ನೂತನ ಸಿಎಂ ಡಿಕೆಶಿ ಅವರನ್ನು ಆಶೀರ್ವದಿಸಿದರು.
ಹುಕ್ಕೇರಿ : ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಭಾಗಿಯಾಗಿಯಾಗಿ ನೂತನ ಸಿಎಂ ಡಿಕೆಶಿ ಅವರನ್ನು ಆಶೀರ್ವದಿಸಿದರು.
ವಿಶೇಷ ಆಮಂತ್ರಣ
ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಶೇಷ ಆಮಂತ್ರಣ ಪತ್ರಿಕೆ ಕಳುಹಿಸಿದ್ದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಹುಕ್ಕೇರಿ ಹಿರೇಮಠ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಹುಕ್ಕೇರಿ ಹಿರೇಮಠದ ಜೊತೆಗೆ ನೂತನ ಸಿಎಂ ಡಿ.ಕೆ.ಶಿವಕುಮಾರ ಅವಿನಾಭಾವ ಸಂಬಂಧ ಹೊಂದಿದ್ದು, ಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳನ್ನ ಗುರುವಿನ ರೂಪದಲ್ಲಿ ಕಾಣುತ್ತಾರೆ. ಕೆಲ ದಿನಗಳ ಹಿಂದೆಯಷ್ಟೆ ಯಡೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೀಘ್ರದಲ್ಲೇ ಡಿ.ಕೆ.ಶಿವಕುಮಾರ ಸಿಎಂ ಆಗಲಿದ್ದಾರೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದರು.
ಸ್ವಾಮೀಜಿಗಳ ಭವಿಷ್ಯ ನಿಜವಾಗಿದ್ದು ಡಿಕೆಶಿ ಸಿಎಂ ಆಗಿರುವದಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ.