ಸಾತನೂರು ಮತ್ತು ಕನಕಪುರ ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಹಲವು ಬಾರಿ ಜಯಗಳಿಸಿ ಶಾಸಕರಾದರು. ಅವರಿಗೆ ಈ ಹಿಂದೆಯೇ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತು. ತಡವಾಗಿಯಾದರೂ ಸಿಕ್ಕಿದೆ. ಇದು ತುಂಬಾ ಸಂತೋಷಕರ ವಿಷಯ. ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಹೈಕಮಾಂಡ್ ಗೆ ಅಭಿನಂದನೆ ಸಲ್ಲಿಸುತ್ತೇನೆ.
ಹಲಗೂರು:
ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ, ಬಡವರ ಏಳ್ಗೆಗೆ ಶ್ರಮಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅಭಿಮಾನಿ ಎಚ್.ಎಂ.ಶಿವಕುಮಾರ್ ತಿಳಿಸಿದರು.ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರವನ್ನು ಹಲಗೂರಿನ ವೃತ್ತದಲ್ಲಿ ಬೃಹತ್ ಎಲ್‌ಇಡಿ ಪರದೆ ಮೂಲಕ ಏರ್ಪಡಿಸಿ ಮಾತನಾಡಿ, ಡಿಕೆಶಿ ಅವರು ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಪ್ರವೇಶ ಮಾಡಿದ್ದರು ಎಂದರು.
ಸಾತನೂರು ಮತ್ತು ಕನಕಪುರ ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಹಲವು ಬಾರಿ ಜಯಗಳಿಸಿ ಶಾಸಕರಾದರು. ಅವರಿಗೆ ಈ ಹಿಂದೆಯೇ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತು. ತಡವಾಗಿಯಾದರೂ ಸಿಕ್ಕಿದೆ. ಇದು ತುಂಬಾ ಸಂತೋಷಕರ ವಿಷಯ. ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಹೈಕಮಾಂಡ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ ಎಲ್ಲರಿಗೂ ಡಿಕೆಶಿ ಅಭಿಮಾನಿಗಳ ಬಳಗದ ವತಿಯಿಂದ ಬಿರಿಯಾನಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಕುಮಾರ್, ಲಿಂಗಪಟ್ಟಣದ ಗಂಗಾಧರ ,ಮಂಜು, ಮರಿಸ್ವಾಮಿ, ರಮೇಶ, ಚಂದನ್, ಲಿಯಾಕತ್ ಅಲಿ (ಪಿಳ್ಳು), ನವೀನ್, ಚೇತನ್ ಬಾಬು, ಜಗದೀಶ್, ಸತೀಶ್ ಸೇರಿದಂತೆ ಹಲವರು ಇದ್ದರು.ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ: ಸಂಭ್ರಮಾಚರಣೆ
ಕನ್ನಡಪ್ರಭ ವಾರ್ತೆ ಪಾಂಡವಪುರರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡಿಕೆಶಿ ಅಭಿಮಾನಿಗಳು, ಕಾಂಗ್ರೆಸ್-ರೈತಸಂಘ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ನೇತೃತ್ವದಲ್ಲಿ ಡಿಕೆಶಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಬನ್ನಾರಿ ಮಾರಿಯಮ್ಮನ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸಾರ್ವಜನಿಕರಿಗೆ ಸಿಹಿ ಹಾಗೂ ಪ್ರಸಾದ ಹಂಚಿ ಸಂಭ್ರಮಿಸಿದರು.ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ವೀಕ್ಷಿಸಲು ಪಟ್ಟಣದ ಅನ್ನಪೂರ್ಣ ಹೋಟೆಲ್ ಬಳಿ ಎಲ್‌ಇಡಿ ಟಿವಿ ವ್ಯವಸ್ಥೆ ಕಲ್ಪಿಸಿ ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಟ್ಟರು. ಡಿಕೆಶಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪಟಾಕಿ ಸಿಡಿಸಿ ಜೈಕಾರದ ಘೋಷಣೆ ಕೂಗಿ ಸಂಭ್ರಮಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಮಾತನಾಡಿ, ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ನಾಡಿನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ದೇವಿಗೆ ವಿಶೇಷವಾದ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದರು.ತಾಲೂಕಿನ ಜಕ್ಕನಹಳ್ಳಿ, ನಾರಾಯಣಪುರ, ಪಟ್ಟಸೋಮನಹಳ್ಳಿ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಮಾಡಲಾಗುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಉತ್ತಮ, ಜನರಪರ, ರೈತರ ಪರವಾದ ಆಡಳಿತ ನೀಡಲಿದ್ದಾರೆ ಎನ್ನುವ ವಿಶ್ವಾಸವಿದ್ದು, ಜನ ಮೆಚ್ಚುಗೆ ಪಡೆದು ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲೂ ಡಿಕೆಶಿ ನೇತೃತ್ವದಲ್ಲಿಯೇ ನಡೆದು ಮುಂದಿನ ಬಾರಿಗೂ ಇವರೇ ಮುಖ್ಯಮಂತ್ರಿಯಾಗಲೆಂದು ಹಾರೈಸಿದರು.ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯೇಂದ್ರಮೂರ್ತಿ, ಎಚ್.ಕೃಷ್ಣೇಗೌಡ, ಶ್ರೀಕಾಂತ್, ಡಿ.ಹುಚ್ಚೇಗೌಡ, ಭರತ್ ಪಾಟೀಲ್, ಚಂದ್ರಶೇಖರ್, ಕೃಷ್ಣೇಗೌಡ, ಧರ್ಮ, ಪಾಪು ಸೇರಿದಂತೆ ಹಲವರು ಇದ್ದರು.