ಸಾರಾಂಶ
ಹೊನ್ನಾಳಿ : ಹೊಸವರ್ಷದ ಜ.5ರಂದು ದಾವಣಗೆರೆ ನಗರದಲ್ಲಿ ಕನಕದಾಸರ 537ನೇ ಜಯಂತ್ಯುತ್ಸವ ಅಂಗವಾಗಿ ಕನಕದಾಸರ ಪುತ್ಥಳಿಯನ್ನು ಅನಾವರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ ಎಂದು ದಾವಣಗೆರೆ ಕುರುಬ ಸಮಾಜದ ಮುಖಂಡ ಆಲೇಕಲ್ ಎಸ್.ಟಿ. ಅರವಿಂದ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಹಲವು ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಶಾಸಕರು, ಅಹಿಂದ ಸಮುದಾಯಗಳ ಅಧ್ಯಕ್ಷರು ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕಿನ ಕುರುಬ ಸಮಾಜದ ಮುಖಂಡರು ಭಾಗವಹಿಸುತ್ತಿದ್ದಾರೆ ಎಂದರು.
ಹೊನ್ನಾಳಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ ಮಾತನಾಡಿ, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನಿಂದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಆಗಮಿಸಬೇಕು ಎಂದು ಮನವಿ ಮಾಡಿದ ಅವರು, ಕಾರ್ಯಕ್ರಮಕ್ಕೆ ಆಗಮಿಸಲು ತಾಲೂಕಿನಲ್ಲಿ ಪ್ರವಾಸ ಮಾಡಿ ಜನರಿಗೆ ಮನವಿ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕುರುಬ ಸಮಾಜದ ಗೌರವಾಧ್ಯಕ್ಷ ಹಾಗೂ ಸರ್ಕಾರಿ ನೌಕರರ ಮಾಜಿ ಅಧಕ್ಷ ಗಾಳಿ ನಾಗರಾಜ, ಸಮಾಜದ ಹಿರಿಯ ಮುಖಂಡ ಬಿ.ಸಿದ್ದಪ್ಪ, ಎಚ್.ಬಿ.ಶಿವಯೋಗಿ ಅವರು ಮಾತನಾಡಿದರು.
ತಾಲೂಕು ಕುರುಬ ಸಮಾಜದ ಕಾರ್ಯಾಧ್ಯಕ್ಷ ಬಾಬೂ ಹೋಬಳದಾರ, ಮಹಾನಗರ ಪಾಲಿಕೆ ಸದಸ್ಯ ಜೆ.ಎನ್. ಶ್ರೀನಿವಾಸ್, ಮುಖಂಡರಾದ ಶಿವಣ್ಣ ಮಾಸ್ಟರ್, ರಾಜು ಮೌರ್ಯ, ಲಿಂಗರಾಜ್, ಪ್ರಕಾಶ್, ಬೀರೇಶ್, ಗುಡದಪ್ಪ, ವಿನಯ್‌ಕುಮಾರ್, ಕಾಂಗ್ರೆಸ್‌ನ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಪುರಸಭೆ ಸದಸ್ಯರಾದ ಎಂ.ಸುರೇಶ್, ರಂಜಿತ್, ಕರವೇ ಶ್ರೀನಿವಾಸ್, ನಿವೃತ್ತ ಎ.ಎಸ್.ಐ ಶಿವಾನಂದಪ್ಪ, ಕಾಯಿಬರುಡೆ ಸಣ್ಣಸಿದ್ದಪ್ಪ, ಹಳದಪ್ಪ ಪಿರ್ಗಿ, ಮುಖಂಡ ಮೂರ್ತ್ಯಪ್ಪ ಹಾಜರಿದ್ದರು.
- - -
(ಬಾಕ್ಸ್) * 1 ಲಕ್ಷ ಜನ ಸೇರಿಸುವ ಗುರಿ: ಮಂಜುನಾಥ್ದಾವಣಗೆರೆಯ ಇಟ್ಟಿಗುಡಿ ಮಂಜುನಾಥ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ 1 ಲಕ್ಷ ಜನರನ್ನು ಸೇರಿಸುವ ಗುರಿಯನ್ನು ಆಯೋಜಕರು ಹೊಂದಿದ್ದಾರೆ. ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಈ ಬಗ್ಗೆ ದಾವಣಗೆರೆಯಲ್ಲಿ ಸಾರ್ವಜನಿಕರ ಗಮನ ಸೆಳೆಯುವ ಉದ್ದೇಶದಿಂದ ಜ.4ರಂದು ಬೆಳಗ್ಗೆ 9.30 ಗಂಟೆಗೆ ದಾವಣಗೆರೆ ಎಸ್‌ಎಸ್ ಹೈಟೆಕ್ ಆಸ್ಪತ್ರೆ ಸಮೀಪದ ಕಾಳಿದಾಸ ವೃತ್ತದಿಂದ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಜ.5ರಂದು ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಬಂಧುಗಳಿಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
- - - -26ಎಚ್.ಎಲ್.ಐ2:
ದಾವಣಗೆರೆಯಲ್ಲಿ ಜ.5ರಂದು ದಾಸಶ್ರೇಷ್ಠ ಕನಕದಾಸರ 357ನೇ ಜಯಂತಿ ಹಾಗೂ ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮ ಆಯೋಜನೆ ಕುರಿತು ಹೊನ್ನಾಳಿ ಪಟ್ಟಣದಲ್ಲಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.