ಸಾರಾಂಶ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರದಲ್ಲಿ ಸಂಚಾರಕ್ಕಾಗಿ ವಿದ್ಯುತ್ ಚಾಲಿತ (ಇವಿ) ಕಾರು ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರದಲ್ಲಿ ಸಂಚಾರಕ್ಕಾಗಿ ವಿದ್ಯುತ್ ಚಾಲಿತ (ಇವಿ) ಕಾರು ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.ಸೋಮವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಗರದಲ್ಲಿ ಪರಿಸರ ಮಾಲಿನ್ಯ ಅದರಲ್ಲೂ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಸಾರ್ವಜನಿಕರು ಸಾಮಾನ್ಯ ಕಾರುಗಳ ಬದಲಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ಕಾರು ಬಳಸುವಂಥ ಸಂದೇಶ ಹೋಗಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರಿಗೆ ಉತ್ತಮ ಇವಿ ಕಾರನ್ನು ಮಂಡಳಿಯಿಂದ ನೀಡಲಾಗುವುದು ಎಂದರು.ಜತೆಗೆ ಇಲಾಖೆ ಸಚಿವರಿಗೂ ಇವಿ ಕಾರು ನೀಡಲಾಗುವುದು. ಜತೆಗೆ ಸರ್ಕಾರ ಇನ್ನುಮುಂದೆ ಇವಿ ಕಾರುಗಳನ್ನಷ್ಟೇ ಖರೀದಿಸುವಂತೆ, ಸಚಿವರಿಗೆ, ಅಧಿಕಾರಿಗಳಿಗೆ ಇವಿಯನ್ನೇ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು.