ಸಾರಾಂಶ
ಹುಕ್ಕೇರಿ: ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವುದು ನಮ್ಮದೂ ವಾದವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹುಕ್ಕೇರಿ: ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವುದು ನಮ್ಮದೂ ವಾದವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ವೇಳೆ ಮುಡಾ ಕಚೇರಿಯಲ್ಲಿ ಕಡತಗಳು ನಾಪತ್ತೆ ವಿಚಾರಕ್ಕೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಇಡಿ ಅವರು ಏನು ಬೇಕೋ ಅದನ್ನು ತನಿಖೆ ಮಾಡುತ್ತಾರೆ. ಎಲ್ಲ ದಾಖಲೆಗಳು ಸರ್ಕಾರದ ಬಳಿ ಇರುತ್ತವೆ. ಯಾವ ದಾಖಲೆಗಳು ಎಲ್ಲಿ ಹೋಗಲು ಅವಕಾಶವಿಲ್ಲ. ಸಚಿವ ಭೈರತಿ ಸುರೇಶ ಅವರು ಕಡತಗಳನ್ನು ನಾಶ ಮಾಡಿದ್ದಾರೆ ಎನ್ನುವ ಎಚ್.ಡಿ.ಕುಮಾರಸ್ವಾಮಿ ಆರೋಪ ಸಾಬೀತಾಗಬೇಕು. ಅದು ಇಡಿ ತನಿಖೆಯಿಂದ ಗೊತ್ತಾಗುತ್ತೆ. ಇಡಿ ತನಿಖೆ ನಡೆಯುವವರೆಗೂ ಕಾದು ನೋಡೋಣ. ಯಾವುದೇ ಅರ್ಜೆಂಟ್ ಇಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.