ರೈತರ ಭೂಮಿ ಮತ್ತು ರಾಜ್ಯದ ಸಂಪತ್ತನ್ನು ರಕ್ಷಿಸುವ ಬದಲು ರಿಯಲ್ ಎಸ್ಟೇಟ್‌ಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ರೈತ ವಿರೋಧಿ । ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತೇವೆ: ವಿಜಯೇಂದ್ರ
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದಿನ ಬೆಳಗಾದರೆ ರಿಯಲ್ ಎಸ್ಟೇಟ್ ವ್ಯವಹಾರ ಬಿಟ್ಟರೆ ಬೇರೆ ಯಾವುದೂ ಕಾಣಿಸುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅಭಿವೃದ್ಧಿ ಎಂದರೆ ನಗರಗಳ ಅಭಿವೃದ್ಧಿ ಮಾತ್ರ ಎಂಬ ಮನೋಭಾವದಿಂದ ಗ್ರಾಮೀಣ ಪ್ರದೇಶ ಹಾಗೂ ರೈತರ ಹಿತವನ್ನು ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಪಟ್ಟಣದ ಬಿಜೆಪಿ ಸೇವಾ ಸೌಧ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಸೇವಾ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಬರ, ನೀರು ಹಾಗೂ ಕೃಷಿ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.ಕನಕಪುರಕ್ಕೆ ವಿಮಾನ ನಿಲ್ದಾಣ ಕೊಂಡೊಯ್ಯುವ ಯೋಜನೆ, ಬಿಡದಿಯಲ್ಲಿ ಕೈಗಾರಿಕೆ ಹಾಗೂ ಇತರ ಅಭಿವೃದ್ಧಿ ಚಟುವಟಿಕೆಗಳಿಗೆ ಭೂಮಿ ಬಳಕೆ, ಶಿಕಾರಿಪುರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಿಂಗ್ ರೋಡ್ ಯೋಜನೆಗಳಂತಹ ಕ್ರಮಗಳಿಂದ ರೈತರ ಭೂಮಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೈತರ ಭೂಮಿ ಮತ್ತು ರಾಜ್ಯದ ಸಂಪತ್ತನ್ನು ರಕ್ಷಿಸುವ ಬದಲು ರಿಯಲ್ ಎಸ್ಟೇಟ್‌ಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ದೂರಿದರು.ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ :ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯಾದ್ಯಂತ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುವುದು. ಗ್ರಾಮೀಣ ಭಾಗದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿಜಯೇಂದ್ರ ಹೇಳಿದರು.ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ:
ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬ ಕಾಂಗ್ರೆಸ್ ಆರೋಪವನ್ನು ವಿಜಯೇಂದ್ರ ತಳ್ಳಿಹಾಕಿದರು. ಎಲ್ಲ ಸಮುದಾಯಗಳ ಅಭಿವೃದ್ಧಿಯನ್ನೂ ಪಕ್ಷ ಬೆಂಬಲಿಸುತ್ತದೆ. ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಶ್ನೆಗಳಿವೆ ಎಂದು ಹೇಳಿದರು. ಆದರೆ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಒಲೈಕೆಯಲ್ಲಿ ತೊಡಗಿ ಉರ್ದು ಹಬ್ಬ ಮಾಡಲು ಮುಂದಾಗಿದ್ದಾರೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕ ಎಂ.ರಾಜಣ್ಣ, ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ಮುಖಂಡರಾದ ತಮ್ಮೇಶ್ ಗೌಡ, ಸುರೇಂದ್ರ ಗೌಡ, ಮಧುಸೂದನ್, ಕನಕ ಪ್ರಸಾದ್, ನಂದೀಶ್, ಪ್ರೀತಂ ಗೌಡ, ಚಿಂತಾಮಣಿ ವೇಣುಗೋಪಾಲ್, ಸತ್ಯನಾರಾಯಣ ರಾವ್, ಆಂಜನೇಯ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರುಬಾಕ್ಸ್....ಬೈಕ್ ರ್ಯಾಲಿಯಲ್ಲಿ ಅದ್ಧೂರಿ ಮೆರವಣಿಗೆ
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ತಾಲೂಕಿನ ಹಂಡಿಗನಾಳ ಗೇಟ್ ಬಳಿಯಿಂದ ಬೈಕ್ ರ್ಯಾಲಿ ಯಲ್ಲಿ ಬಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೋಟೆ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸೋಮನಾಥನ ದರ್ಶನ ಪಡೆದರು. ನಂತರ ಕಾಲ್ನಡಿಗೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ಮೂಲಕ ಬಿಜೆಪಿ ಸೇವಾಸೌಧದ ವೇದಿಕೆಗೆ ಆಗಮಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು......ರೈತರೊಂದಿಗೆ ವಿಜಯೇಂದ್ರ ಸಂವಾದ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಣ್ಣು, ತರಕಾರಿ, ರೇಷ್ಮೆ ಹಾಗೂ ಹೂವು ಬೆಳೆಯುವ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಕ್ಷದ ಮುಖಂಡರು ಹಾಗೂ ರೈತರೊಟ್ಟಿಗೆ ಸುದೀರ್ಘವಾಗಿ ಚರ್ಚಿಸಿದ್ದು, ರೈತರ ಹಿತರಕ್ಷಣೆಗೆ ಬಿಜೆಪಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ಭಾಗಕ್ಕೆ ಶಾಶ್ವತ ಹಾಗೂ ಶುದ್ಧ ಕುಡಿಯುವ ನೀರಿನ ಯೋಜನೆಯ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದ ರೈತರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು.ಸುದ್ದಿ ಚಿತ್ರ ೧ ಪಟ್ಟಣದ ಬಿಜೆಪಿ ಸೇವಾ ಸೌಧ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಗಣ್ಯರು