ಸಾರಾಂಶ
ಹೊಸಕೋಟೆ: ಮಾ.10ರಂದು ಭಾನುವಾರ ತಾಲೂಕಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ತಾಪಂ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಸಮಸ್ಯೆ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯತೆಯಿಂದ ಆಯಾ ಇಲಾಖೆಗಳ ಸವಲತ್ತುಗಳ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಫಲಾನುಭವಿಗಳನ್ನು ಕರೆದಿರುವ ಜವಾಬ್ದಾರಿಯೂ ನಿಮ್ಮದಾಗಿದೆ ಪ್ರತಿ ಗ್ರಾಮಕ್ಕೆ ಬಸ್ ಕಳುಹಿಸುವ ವ್ಯವಸ್ಥೆ ಮಾಡಬೇಕೆಂದರು.ಜಿಲ್ಲಾಧಿಕಾರಿ ಶಿವಶಂಕರ್ ಮಾತನಾಡಿ, ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಅಧಿಕಾರಿಗಳು ಪೂರ್ವ ನಿಯೋಜಿತವಾಗಿ ಅಗತ್ಯ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಆಗಮನದಿಂದ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಪರಸ್ಪರ ಕೈಜೋಡಿಸಬೇಕು. ಮಾರ್ಚ್ 8ರ ಶುಕ್ರವಾರ ಶಿವರಾತ್ರಿ ಹಬ್ಬ, ಮಾರ್ಚ್ 9ರಂದು ಎರಡನೇ ಶನಿವಾರ, ಮಾರ್ಚ್ 10 ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಸರಣಿ ರಜೆ ಇದೆ ಎಂದು ಯಾವುದೇ ಅಧಿಕಾರಿಗಳು ರಜೆ ಹಾಕುವಂತಿಲ್ಲ ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಅನುರಾಧ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ತಹಸೀಲ್ದಾರ್ ವಿಜಯ್ ಕುಮಾರ್, ಎಎಸ್ಪಿ ಪುರುಷೋತ್ತಮ್, ತಾಪಂ ಇಒ ಚಂದ್ರಶೇಖರ್, ಜಿಲ್ಲಾ, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.ಫೋಟೋ: 5ಹೆಚ್ ಎಸ್ ಕೆ 3ಹೊಸಕೋಟೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆಯಲ್ಲಿ ಚೆನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣವನ್ನು ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.