ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ

| Published : Jul 26 2025, 12:30 AM IST

ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ.

ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್ ಜಮೀರ್‌ ಅಹಮ್ಮದ್ ಖಾನ್, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್‌, ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎಸ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್. ಆರ್‌. ಶ್ರೀನಿವಾಸು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಮತ್ತು ಲ್ಯಾಂಡ್ ಆರ್ಮಿಯ ಅಧ್ಯಕ್ಷರಾದ ಬಿ.ಕೆ ಸಂಗಮೇಶ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಎಚ್.ಡಿ.ರೇವಣ್ಣ, ಡಾ. ಸಿ.ಎನ್.ಬಾಲಕೃಷ್ಣ, ಎ.ಮಂಜು, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ. ಸೂರಜ್ ರೇವಣ್ಣ ಹಾಗೂ ಅರಸೀಕೆರೆ ನಗರಸಭೆಯ ಅಧ್ಯಕ್ಷರಾದ ಸಮೀವುಲ್ಲಾ, ಅರಸೀಕೆರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ಅರುಣ್‌ ಕುಮಾರ್‌, ಅರಸೀಕೆರೆ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಧರ್ಮಶೇಖರ್‌, ಅರಸೀಕೆರೆ ನಗರಸಭೆಯ ಉಪಾಧ್ಯಕ್ಷ ಮನೋಹರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ:ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಶನಿವಾರ ಅರಸೀಕೆರೆಗೆ ಆಗಮಿಸಿ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ನಿಟ್ಟಿನಲ್ಲಿ ಶುಕ್ರವಾರ ಅರಸೀಕೆರೆ ತಾಲೂಕು ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.

ಹೆಲಿಕಾಪ್ಟರ್‌ ಮೂಲಕ ಸಿಎಂ ಆಗಮನ:ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮತ್ರಿ ಶಿವಕುಮಾರ್ ಅವರು ಜು.೨೬ರಂದು ಬೆ.೧೧ ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಅರಸೀಕೆರೆ ತಾಲೂಕಿನ ಗುಂಡಕಾನಹಳ್ಳಿಯ ಕಸ್ತೂರಬಾ ಟ್ರಸ್ಟ್ ಆವರಣದ ಹೆಲಿಪ್ಯಾಡ್‌ಗೆ ಬೆ.೧೧.೪೫ಕ್ಕೆ ಆಗಮಿಸಲಿದ್ದಾರೆ.ನಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅರಸೀಕೆರೆ ತಾಲೂಕಿನ ಯಾದಾಪುರ ರಸ್ತೆಯ ಜೇನುಕಲ್ ನಗರದಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೪ ಗಂಟೆಗೆ ಅರಸೀಕೆರೆ ತಾಲೂಕಿನ ಗುಂಡಕಾನಹಳ್ಳಿಯ ಕಸ್ತೂರಬಾ ಟ್ರಸ್ಟ್ ಆವರಣದ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

=================================================

ಫೋಟೋ ಶೀರ್ಷಿಕೆ25ಎಚ್ಎಸ್ಎನ್13 : ಮುಖ್ಯಮಂತ್ರಿಗಳ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ಅರಸೀಕೆರೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.