ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮಂಗಳೂರು ಪಿಲಿಕುಳದ ಮಯೂರ ರಿವರ್ ರೆಸಾರ್ಟ್ ಫಲ್ಗುಣಿ ಘಟಕಕ್ಕೆ ಶನಿವಾರ ಭೇಟಿ ನೀಡಿ, ನಿಗಮದ ಡೈರಿ, ಕ್ಯಾಲೆಂಡರ್ ಹಾಗೂ ಪ್ರವಾಸಿಗರಿಗೆ ಹೊಟೇಲ್‌ ಹಾಗೂ ವ್ಯಾಕೇಜ್ ಬುಕ್ಕಿಂಗ್ ಮಾಡಲು, ಮಾಹಿತಿ ನೀಡುವ ಮೊಬೈಲ್ ಆ್ಯಪ್‌ ಬಿಡುಗಡೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮಂಗಳೂರು ಪಿಲಿಕುಳದ ಮಯೂರ ರಿವರ್ ರೆಸಾರ್ಟ್ ಫಲ್ಗುಣಿ ಘಟಕಕ್ಕೆ ಶನಿವಾರ ಭೇಟಿ ನೀಡಿ, ನಿಗಮದ ಡೈರಿ, ಕ್ಯಾಲೆಂಡರ್ ಹಾಗೂ ಪ್ರವಾಸಿಗರಿಗೆ ಹೊಟೇಲ್‌ ಹಾಗೂ ವ್ಯಾಕೇಜ್ ಬುಕ್ಕಿಂಗ್ ಮಾಡಲು, ಮಾಹಿತಿ ನೀಡುವ ಮೊಬೈಲ್ ಆ್ಯಪ್‌ ಬಿಡುಗಡೆಗೊಳಿಸಿದರು.

ಈ ಸಂದರ್ಭ ಅವರು ಮಯೂರ ರಿವರ್ ರೆಸಾರ್ಟ್ ಫಲ್ಗುಣಿ ಘಟಕದಲ್ಲಿ ಗಿಡ ನೆಟ್ಟು ನೀರುಣಿಸಿದರು. ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಅವರು ಮುಖ್ಯಮಂತ್ರಿ ಅವರೊಡನೆ ಘಟಕಕ್ಕೆ ಬೇಕಾಗಿರುವ ಸೌಕರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಎಸ್‌ಟಿಡಿಸಿ ಅಧ್ಯಕ್ಷ ಎಂ .ಶ್ರೀನಿವಾಸ್ ಸಹಿತ ಗಣ್ಯರು ಹಾಜರಿದ್ದರು.ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೊಳಪಟ್ಟು ಪ್ರವಾಸೋದ್ಯಮ ಇಲಾಖೆಯ ಅಂಗ ಸಂಸ್ಥೆಯಾಗಿದೆ. 55 ವರ್ಷಗಳಿಂದ ಆತಿಥ್ಯ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಕ್ಕೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ ಅತಿಥ್ಯ ಸೇವೆಯನ್ನು ಒದಗಿಸುತ್ತಾ ಬಂದಿರುತ್ತದೆ. ನಿಗಮವು ಒಟ್ಟು 25 ವಿವಿಧ ಮಾದರಿಯ ಹೋಟೆಲ್ ಘಟಕಗಳನ್ನು ಹೊಂದಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.