ರಾಷ್ಟ್ರಪತಿ ಕುರಿತು ಸಿಎಂ ಕೀಳು ಮಾತು ಖಂಡನೀಯ

| Published : Jan 31 2024, 02:22 AM IST

ಸಾರಾಂಶ

ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಮ್ಮಿಕೊಂಡ ಶೋಷಿತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೋಷಿತ ಸಮುದಾಯದಿಂದ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕೀಳು ಭಾಷೆ ಬಳಸಿರುವುದು ಖಂಡನೀಯವಾಗಿದೆ. ಮುಖ್ಯಮಂತ್ರಿ ಅವರಿಗೆ ಘನತೆ ತರುವ ವಿಷಯವಲ್ಲ ಎಂದು ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾವು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು. ಹಿರಿಯರಿಗೆ ಈ ರೀತಿ ಮಾತನಾಡುವುದು ಸ್ವಾಭಾವಿಕ ಎಂದು ಹೇಳಿರುವುದು ತೀರಾ ಅಕ್ಷಮ್ಯ. ತಾವು ರಾಜ್ಯದ ಮುಖ್ಯಮಂತ್ರಿ ಹಾಗೂ ಕಾನೂನು ಬಲ್ಲವರು ಈ ರೀತಿ ಮಾತನಾಡುವುದು ಸರಿಯೇ ಎನ್ನುವುದನ್ನು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂವಿಧಾನದ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಈ ರೀತಿ ಮಾತನಾಡುವುದು ಕ್ಷಮಿಸುವ ವಿಚಾರವಲ್ಲ. ಇನ್ನೊಮ್ಮೆ ರಾಜ್ಯದ ಜನತೆಯ ಹಾಗೂ ದೇಶದ ಜನತೆ ಕ್ಷಮೆಯನ್ನು ಕೇಳಬೇಕು ಎಂದು ಆಗ್ರಹಿಸಿದ್ದಾರೆ.ಸಿದ್ದರಾಮಯ್ಯನವರು ನಾನು ಸಂವಿಧಾನದ ಪರಿಪಾಲಕ, ಬಸವಣ್ಣನವರ ಅನುಯಾಯಿ ಎಂದು ಹೇಳಿಕೊಂಡು ಭಾಷಣ ಮಾಡುವ ಇವರು ದೇಶದ ಘನವೆತ್ತ ರಾಷ್ಟ್ರಪತಿಗಳಿಗೆ ಅಸಂವಿಧಾನಿಕವಾಗಿ ಮಾತನಾಡುವುದು ಖಂಡನೀಯವಾಗಿದೆ. ಎಲ್ಲರನ್ನೂ ಪ್ರೀತಿಯಿಂದ ಕಂಡ ಬಸವಣ್ಣನವರ ಅನುಯಾಯಿ ಎಂದು ಹೇಳಿಕೊಳ್ಳುವ ನೀವು ಈ ರೀತಿ ಮಾತನಾಡುವುದು ಸರಿಯಾದ ಕ್ರಮವಲ್ಲ. ಇದು ಮಹಿಳಾ ವಿರೋಧಿ ಧೋರಣೆಯಾಗಿದೆ.

-ಸಾವಿತ್ರಿ ಕಲ್ಯಾಣಶೆಟ್ಟಿ, ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ.