ಸಾರಾಂಶ
ಜೂನ್ 9 ರಂದು ಪ್ರಕಟಗೊಂಡ ಕನ್ನಡಪ್ರಭ ಪತ್ರಿಕೆ ಸುದ್ದಿಯ ತುಣುಕು
ಕನ್ನಡಪ್ರಭ ವಾರ್ತೆ ಔರಾದ್
ತಾಲೂಕಿನ ಜಿರ್ಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಕಟ್ಟಡದ ಛಾವಣಿಯ ಸಿಮೆಂಟ್ ಚಕ್ಕಳೆ ಕಳಚಿ ಬೀಳುತ್ತಿದೆ. ಶಿಕ್ಷಕರು ಆತಂಕದಲ್ಲಿಯೇ ತರಗತಿ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
‘ಕನ್ನಡಪ್ರಭ’ ಜೂನ್ 9 ರಂದು ಭಯದ ನೆರಳಲ್ಲಿಯೇ ಮಕ್ಕಳಿಗೆ ನಿತ್ಯ ಪಾಠ ಎಂಬ ಶಿರ್ಷಿಕೆಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಜಿರ್ಗಾ (ಬಿ) ಶಾಲೆ ಕಟ್ಟಡದ ಸ್ಥಿತಿಗತಿ ಮಾಹಿತಿ ಕೇಳಿದಾರೆ.ಅದರಂತೆ ಪರಿಶೀಲನೆ ನಡೆಸಿದ್ದು, ಸದರಿ ಶಾಲೆಯಲ್ಲಿ 4 ಕೊಠಡಿಗಳಿದ್ದು, 37 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯ 3 ಕೊಠಡಿಗಳು ಶಿಥಿಲಗೊಂಡಿವೆ. ಮಕ್ಕಳ ಹಿತದೃಷ್ಟಿಯಿಂದ ಮುಖ್ಯೋಪಾಧ್ಯಾಯರ ಕೋಣೆಯಲ್ಲಿ ಮಕ್ಕಳನ್ನು ಕೂಡಿಸಿ ಪಾಠ ಬೋಧನೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸದರಿ ಶಾಲೆಗೆ ಕೆಕೆಆರ್‌ಡಿಬಿ ಯೋಜನೆಯಡಿ ₹12 ಲಕ್ಷ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ಔರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ.