ಸಾರಾಂಶ
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.
ಈ ಕುರಿತು ಸೋಮವಾರ(ಡಿ.23)ದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರೊಂದಿಗೆ ಸಭೆ ನಡೆಸಿ ರೈತರ ಕೆಲವು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಕೈಬಿಡಲಾಗಿದೆ. ಆದರೆ, ನಮ್ಮ ಸಂಪೂರ್ಣ ಬೇಡಿಕೆಗಳ ಈಡೇರಿಕೆಗಾಗಿ ಪಾದಯಾತ್ರೆ ಕೈ ಬಿಟ್ಟು ಚನ್ನರಾಯಪಟ್ಟಣದಲ್ಲಿ ರೈತ ಮುಖಂಡರ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.
ಮುಖಂಡರಾದ ಮಾರೇಗೌಡ ಮಾತನಾಡಿ, ರೈತ ಸಮಾವೇಶದಲ್ಲಿ ಭೂಸ್ವಾಧೀನ ಹೋರಾಟ ಸಮಿತಿ ಸದಸ್ಯರ ಮೇಲೆ ಹಾಕಿರುವ ಎಲ್ಲ ಪೊಲೀಸ್ ಕೇಸ್‌ಗಳನ್ನು ಸರ್ಕಾರ ವಾಪಸ್ ಪಡೆಯುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬಿದಲೂರು ರವಿಕುಮಾರ್, ನಂಜಪ್ಪ, ಅಶ್ವತ್ಥಪ್ಪ, ಜಯರಾಮೇಗೌಡ, ಪಿಳ್ಳಪ್ಪ, ಗೋಪಾಲಗೌಡ ಹಾಗೂ ಇತರರು ಉಪಸ್ಥಿತರಿದ್ದರು.