ಕನಕಪುರ: ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಗೌರಿ–ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಅವರು ತಂಬಿಟ್ಟಿನ ಆರತಿಯೊಂದಿಗೆ ಆಗಮಿಸಿ ನಾಗರಕಲ್ಲಿಗೆ ತನಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು

ಕನಕಪುರ: ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಗೌರಿ–ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಅವರು ತಂಬಿಟ್ಟಿನ ಆರತಿಯೊಂದಿಗೆ ಆಗಮಿಸಿ ನಾಗರಕಲ್ಲಿಗೆ ತನಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಪತ್ನಿ ಎಂಬ ಅಹಂ ಇಲ್ಲದೆ, ಗ್ರಾಮದ ಮಹಿಳೆಯರೊಂದಿಗೆ ಸಾಮಾನ್ಯ ಮಹಿಳೆಯರಂತೆ ಗೌರಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣರ ಸಂಪ್ರದಾಯದಂತೆ ನಾಗರಕಲ್ಲಿಗೆ ಪೂಜೆ ಸಲ್ಲಿಸಿ, ಕುಟುಂಬ ಹಾಗೂ ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಿದರು. ಪೂಜೆ ಬಳಿಕ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಉಷಾ ಶಿವಕುಮಾರ್‌ ಅವರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿ, ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಕೆ ಕೆ ಪಿ ಸುದ್ದಿ 02:

ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್

ನಾಗರಕಲ್ಲಿಗೆ ತನಿ ಎರೆದು ಮಹಿಳೆಯರಿಗೆ ಪರಸ್ಪರ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದರು..