ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಅವರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು ನಾಲ್ಕು ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ತಲುಪಿಸುತ್ತಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗುತ್ತಿದೆ ಎಂದು ಟೀಕಿಸುವ ವಿರೋಧ ಪಕ್ಷದವರು ಮೊದಲು ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳಿಗೆ ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಕನ್ನಡಪ್ರಭ ವಾರ್ತೆ ಹಾಸನ
ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಅವರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು ನಾಲ್ಕು ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ತಲುಪಿಸುತ್ತಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗುತ್ತಿದೆ ಎಂದು ಟೀಕಿಸುವ ವಿರೋಧ ಪಕ್ಷದವರು ಮೊದಲು ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳಿಗೆ ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.ಹಾಸನಾಂಬೆ ದೇವಿಯ ದರ್ಶನಕ್ಕೆ ಭಾನುವಾರ ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಪೆಟ್ರೋಲ್, ಡೀಸೆಲ್ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆಯೂ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಕೈಗೆ ಹಣ ನೀಡುವ ಮೂಲಕ ಅವರ ಬದುಕಿಗೆ ನೆರವಾಗಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಒಂದು ಕಡೆ ಜನರಿಗೆ ನೆರವು ನೀಡುತ್ತಿದ್ದೇವೆ. ಮತ್ತೊಂದು ಕಡೆ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದೇವೆ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಜನರಿಗೆ ಏನು ಕೊಡುಗೆ ನೀಡಿದೆ ಎಂಬುದನ್ನು ಅವರು ಹೇಳಬೇಕು ಎಂದರು.ಕೃಷಿ ಉತ್ಪನ್ನಗಳಿಗೆ ಕೇಂದ್ರ ಬೆಂಬಲ ಬೆಲೆ ನಿಗದಿಪಡಿಸಲಿಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾದರೂ ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮಗಳನ್ನು ಕೈಗೊಂಡಿಲ್ಲ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಕೇಳುತ್ತಿದ್ದಾರೆ. ಸಕ್ಕರೆ ಸೇರಿದಂತೆ ಕೃಷಿ ಉತ್ಪನ್ನಗಳ ಬೆಲೆ ನಿಗದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ ಬೆಂಬಲ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ರೈತರ ಹಿತಾಸಕ್ತಿ ಕಾಪಾಡುವ ಬಗ್ಗೆ ಮಾತನಾಡುವವರು ಮೊದಲು ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲಿ ಎಂದು ಆಗ್ರಹಿಸಿದರು.ರೈತರ ಅನುಕೂಲಕ್ಕಾಗಿ ಹಾಲಿನ ಬೆಲೆ ಏರಿಕೆ
ರಾಜ್ಯದಲ್ಲಿ ಹಾಲಿನ ಬೆಲೆ ಹೆಚ್ಚಳದ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದನ್ನು ಉಲ್ಲೇಖಿಸಿದ ಅವರು, ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಲೆ ಏರಿಕೆ ಮಾಡಲಾಗಿದೆ. ಗ್ರಾಹಕರಿಗೆ ಲೀಟರ್ಗೆ ಎರಡು ರೂಪಾಯಿ ಹೆಚ್ಚುವರಿ ಹೊರೆ ಬಿದ್ದಿದ್ದರೂ ಅದರ ಉದ್ದೇಶ ರೈತರಿಗೆ ಹೆಚ್ಚಿನ ಹಣ ದೊರಕಿಸುವುದಾಗಿದೆ. ರೈತರಿಗೆ ನೀಡುವ ಪ್ರೋತ್ಸಾಹಧನ ಸೇರಿದಂತೆ ಹಾಲು ಉತ್ಪಾದನಾ ಕ್ಷೇತ್ರದ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಬೇಕಿದೆ ಎಂದರು.ಹಾಸನ ಹಾಲು ಒಕ್ಕೂಟದ ಆರ್ಥಿಕ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಪ್ರತಿದಿನ ದೊಡ್ಡ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದ್ದು, ಅದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದಿರುವುದು ಸಮಸ್ಯೆಯಾಗಿದೆ. ಹೆಚ್ಚುವರಿ ಹಾಲನ್ನು ಹಾಲಿನ ಪುಡಿಯಾಗಿ ಪರಿವರ್ತಿಸಲಾಗುತ್ತಿದೆ. ಆದರೆ ಅದಕ್ಕೂ ನಿರೀಕ್ಷಿತ ಬೇಡಿಕೆ ಇಲ್ಲ. ಇದರಿಂದ ಒಕ್ಕೂಟಕ್ಕೆ ವಾರ್ಷಿಕ ನಷ್ಟ ಉಂಟಾಗುತ್ತಿದೆ ಎಂಬ ಅಂಕಿಅಂಶಗಳು ಬಂದಿವೆ. ಈ ಸಮಸ್ಯೆಯ ಮೂಲ ಕಾರಣಗಳನ್ನು ಪರಿಶೀಲಿಸಿ ರೈತರಿಗೆ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು. ಹಾಲು ಉತ್ಪಾದಕರ ಸಹಕಾರ ಸಂಘಗಳು ಉಳಿಯಬೇಕು. ಗ್ರಾಮೀಣ ಭಾಗದ ರೈತರ ಬದುಕಿಗೆ ಆಧಾರವಾಗಿರುವ ಹಾಲು ಉತ್ಪಾದನಾ ವ್ಯವಸ್ಥೆ ಬಲಗೊಳ್ಳಬೇಕು. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.ಹಾಸನಾಂಬೆ ಕಾರಿಡಾರ್ ನಿರ್ಮಾಣದ ಚಿಂತನೆಹಾಸನಾಂಬೆ ದೇವಾಲಯದ ಅಭಿವೃದ್ಧಿ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರತಿ ವರ್ಷ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಸುಮಾರು 25ರಿಂದ 30 ಲಕ್ಷ ಭಕ್ತರು ಆಗಮಿಸುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹಾಸನಾಂಬೆ ಕಾರಿಡಾರ್ ನಿರ್ಮಿಸುವ ಯೋಜನೆಯ ಚಿಂತನೆ ಇದೆ ಎಂದು ತಿಳಿಸಿದರು.ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕೆಲವು ಕ್ರಮಗಳನ್ನು ಕೈಗೊಂಡಿರುವುದನ್ನು ಹೊರತುಪಡಿಸಿ, ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್ ಇತರರು ಇದ್ದರು.
