ಸಾರಾಂಶ
ಒಂದೇ ದಿನ 5 ಇಲಾಖೆಗಳ ಸಭೆ ನಡೆಸಿ ತೆರಿಗೆ ಸಂಗ್ರಹಕ್ಕೆ 3 ತಿಂಗಳ ಗುರಿ ಹಾಕಿ ಸಿಎಂ ಸಿದ್ದರಾಮಯ್ಯ ಆಡಳಿತಕ್ಕೆ ವೇಗ ಕೊಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ. ಈ ವೇಳೆ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇದರಲ್ಲಿ ನಿಗದಿತ ಗುರಿ ತಲುಪದಿದ್ದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಅಬಕಾರಿ, ವಾಣಿಜ್ಯ, ನೋಂದಣಿ ಮುದ್ರಾಂಕ, ಗಣಿ ಭೂ ವಿಜ್ಞಾನ ಮತ್ತು ಸಾರಿಗೆ ಇಲಾಖೆಗಳ ಜತೆ ಅವರು ಸಭೆ ನಡೆಸಿದರು.