ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯದಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಇದರೊಂದಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.ಸಿದ್ದರಾಮಯ್ಯನವರ ಕಾಲ್ಗುಣ ಸರಿಯಿಲ್ಲವೆಂದು ಟೀಕಿಸುತ್ತಿದ್ದವರಿಗೆ ಹೊಸ ಇತಿಹಾಸ ಸೃಷ್ಟಿಸಿ ಬಾಯಿ ಮುಚ್ಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮೂರನೇ ಬಾರಿ, ಉಪಮುಖ್ಯಮಂತ್ರಿಯಾಗಿ ಒಂದು ಬಾರಿ ಸೇರಿದಂತೆ ನಾಲ್ಕು ಬಾರಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.
ಇನ್ನು ಇದಕ್ಕೂ ಮೊದಲು ಬಾಗಿನ ಅರ್ಪಿಸುವ ಜಾಗವನ್ನು ವಿವಿಧ ಹೂವುಗಳಿಂದ ಶೃಂಗರಿಸಲಾಗಿತ್ತು. ತಳಿರು ತೋರಣಗಳನ್ನು ಕಟ್ಟಿದ್ದರಿಂದ ಅಣೆಕಟ್ಟು ಬಳಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶ್ರೀರಂಗಪಟ್ಟಣದ ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿ ಅಧ್ಯಕ್ಷ ಡಾ. ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದ ವೈದಿಕರ ತಂಡ ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿತು. ೪೦ ಜೋಡಿ ಮೊರದಲ್ಲಿ ಬಳೆ, ಹಸಿರು ಬಣ್ಣದ ರವಿಕೆ ಕಣ, ಅರಿಶಿನ-ಕುಂಕುಮ ಸೇರಿದಂತೆ ಇತರ ದ್ರವ್ಯಾಧಿ ಸಾಮಗ್ರಿಗಳಿಂದ ಕೂಡಿದ ಬಾಗಿನ ಸಿದ್ಧಪಡಿಸಿಕೊಂಡಿತ್ತು.ಜಲಾಶಯದ ಕೆಳ ಭಾಗದಲ್ಲಿರುವ ಕಾವೇರಿ ಮಾತೆ ಪ್ರತಿಮೆ ಬಳಿ ವಿಶೇಷ ಪೂಜೆ ಸಲ್ಲಿಸಲು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿತ್ತು. ಪೂಜಾ ಸ್ಥಳವನ್ನು ಸಹ ತಳಿರು ತೋರಣ ಹಾಗೂ ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು.
ಸುಮಾರು ಮಧ್ಯಾಹ್ನ ೧.೩೦ರ ವೇಳೆಗೆ ಅಣೆಕಟ್ಟು ಬಳಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಬೋಸರಾಜು ಮತ್ತು ಶಾಸಕರು ಆಗಮಿಸಿದರು. ಅರ್ಚಕ ಡಾ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿ ಬಾಗಿನ ಸಮರ್ಪಿಸಿದರು. ನಂತರ ಅಣೆಕಟ್ಟು ಕೆಳಭಾಗವಿರುವ ಕಾವೇರಿ ಪ್ರತಿಮೆಗೂ ಕೂಡ ಪೂಜೆ ಸಲ್ಲಿಸಿದರು.ಎಲ್‌ಇಡಿ ಸ್ಕ್ರೀನ್‌ನಲ್ಲಿ ಪ್ರದರ್ಶನ:
ವೇದಿಕೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಷಣಕ್ಕೆ ಮುನ್ನವೇ ಕಾವೇರಿ ಆರತಿ ಕುರಿತಂತೆ ನೀಲಿ ನಕ್ಷೆಯನ್ನು ಎಲ್‌ಇಡಿ ಸ್ಕ್ರೀನ್‌ನಲ್ಲಿ ಪ್ರದರ್ಶಿಸಲಾಯಿತು. ಅಧಿಕಾರಿಯೊಬ್ಬರು ಕಾವೇರಿ ಆರತಿ ನಡೆಯುವ ಬಗ್ಗೆ ನೀಲಿ ನಕ್ಷೆಯನ್ನು ಪ್ರದರ್ಶಿಸುತ್ತಾ ವಿವರಣೆ ನೀಡಿದರು.ಸ್ಮಾರಕ ನಿರ್ಮಾಣಕ್ಕೆ ಸೂಚನೆ:
ಕೃಷ್ಣರಾಜಸಾಗರ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಇದೊಂದು ಹೊಸ ದಾಖಲೆ. ಇದರ ನೆನಪು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯಬೇಕು. ಮುಂದಿನ ಪೀಳಿಗೆಗೂ ಗೊತ್ತಾಗಬೇಕು. ಜೂನ್ ತಿಂಗಳಲ್ಲಿ ಜಲಾಶಯ ಭರ್ತಿಯಾದ ಸವಿನೆನಪಿಗಾಗಿ ಸ್ಮಾರಕವೊಂದನ್ನು ನಿರ್ಮಿಸಲು ಶೀಘ್ರ ಶಿಲಾನ್ಯಾಸ ನೆರವೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳೀಯ ಶಾಸಕರು, ಅಧಿಕಾರಿಗಳಿಗೆ ಸೂಚಿಸಿದರು.ಜೊತೆಗೆ ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ಈ ವರ್ಷ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ಭರ್ತಿಯಾಗಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದಲೇ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದರು.
ಒಟ್ಟಾರೆ ಅವಧಿಗೂ ಮುನ್ನ ಭರ್ತಿಯಾದ ಕೃಷ್ಣರಾಜಸಾಗರ ಹೊಸದೊಂದು ಇತಿಹಾಸ ನಿರ್ಮಾಣ ಮಾಡಿದರೆ, ಅತ್ತ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮೂಡಿಸಿದೆ.ನಾಲ್ಕನೇ ಬಾರಿ ಸಿದ್ದರಾಮಯ್ಯ ಬಾಗಿನಕನ್ನಡಪ್ರಭ ವಾರ್ತೆ ಮಂಡ್ಯ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ೨೦೧೩ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಬಾಗಿನ ಅರ್ಪಿಸುವ ಭಾಗ್ಯ ಒದಗಿ ಬಂದಿರಲಿಲ್ಲ. ೨೦೧೪ರಲ್ಲಿ ಅಣೆಕಟ್ಟೆ ೧೨೩ ಅಡಿಗೆ ತಲುಪಿ ಜಲಾಶಯ ಆಗಲೂ ತುಂಬಿರಲಿಲ್ಲ. ಬಳಿಕ ಹೇಮಾವತಿ ಜಲಾಶಯದಿಂದ ಒಂದು ಅಡಿಗೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಿ ಕನ್ನಂಬಾಡಿ ಅಣೆಕಟ್ಟೆ ತುಂಬಿಸಿ ಬಾಗೀನ ಅರ್ಪಿಸಿದ್ದರು. ನಂತರ ಕೃಷ್ಣರಾಜಸಾಗರ ಜಲಾಶಯ ತುಂಬದ ಹಿನ್ನೆಲೆಯಲ್ಲಿ ೨೦೧೫, ೧೬, ೧೭ರಲ್ಲೂ ಬಾಗಿನ ಅರ್ಪಿಸಲು ಸಾಧ್ಯವಾಗಲೇ ಆಗಲಿಲ್ಲ. ಹೀಗಾಗಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರೂ ಕೇವಲ ಮೂರು ಬಾರಿ ಮಾತ್ರ ಬಾಗೀನ ಅರ್ಪಿಸಿದ್ದರು. ಇದೀಗ ಸಿದ್ದರಾಮಯ್ಯನವರ ಅದೃಷ್ಟವೆಂಬಂತೆ ಈ ಬಾರಿ ಜೂನ್ ತಿಂಗಳಲ್ಲೇ ಜಲಾಶಯ ಭರ್ತಿಯಾಗಿದ್ದು, ಈ ತಿಂಗಳಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದು ವಿಶೇಷವಾಗಿದೆ.ಅಣೆಕಟ್ಟು ಬಳಿ ಹಬ್ಬದ ವಾತಾವರಣ
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯದಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಇದರೊಂದಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.ಇನ್ನು ಇದಕ್ಕೂ ಮೊದಲು ಬಾಗಿನ ಅರ್ಪಿಸುವ ಜಾಗವನ್ನು ವಿವಿಧ ಹೂವುಗಳಿಂದ ಶೃಂಗರಿಸಲಾಗಿತ್ತು. ತಳಿರು ತೋರಣಗಳನ್ನ ಕಟ್ಟಿದ್ದರಿಂದ ಅಣೆಕಟ್ಟು ಬಳಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಮಧ್ಯಾಹ್ನ ೧.೩೦ರ ವೇಳೆಗೆ ಅಣೆಕಟ್ಟು ಬಳಿ ಆಗಮಿಸಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ಸಹದ್ಯೋಗಿಗಳು ಮತ್ತು ಶಾಸಕರು ಅರ್ಚಕ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿ ಬಾಗಿನ ಸಮರ್ಪಿಸಿದರು. ನಂತರ ಅಣೆಕಟ್ಟು ಕೆಳಭಾಗವಿರುವ ಕಾವೇರಿ ಪ್ರತಿಮೆಗೂ ಕೂಡ ಪೂಜೆ ಸಲ್ಲಿಸಿದರು.ಇನ್ನು ಈ ಬಾರಿ ಜಲಾಶಯ ಭರ್ತಿಯಾಗಿರುವುದರ ನೆನಪಿಗಾಗಿ ಸ್ಮಾರಕವೊಂದನ್ನು ನಿರ್ಮಿಸಲು ಶೀಘ್ರ ಶಿಲಾನ್ಯಾಸ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಒಟ್ಟಾರೆ ಅವಧಿಗೂ ಮುನ್ನ ಭರ್ತಿಯಾದ ಕೃಷ್ಣರಾಜಸಾಗರ ಹೊಸದೊಂದು ಇತಿಹಾಸ ನಿರ್ಮಾಣ ಮಾಡಿದರೆ, ಅತ್ತ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮೂಡಿಸಿದೆ.