ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ - 4 ಲಕ್ಷ ಜನ ಸೇರುವ ನಿರೀಕ್ಷೆ

| Published : Aug 09 2024, 12:32 AM IST / Updated: Aug 09 2024, 05:18 AM IST

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ - 4 ಲಕ್ಷ ಜನ ಸೇರುವ ನಿರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ವಾಲ್ಮೀಕಿ ಹಗರಣ, ಎಂಡಿಎ ಹಗರಣ ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಆ.8 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಸಂಘಟಿಸಿದೆ.

 ಮೈಸೂರು :  ವಾಲ್ಮೀಕಿ ಹಗರಣ, ಎಂಡಿಎ ಹಗರಣ ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಆ.8 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಸಂಘಟಿಸಿದೆ.

ರಾಜ್ಯಾದ್ಯಂತದಿಂದ 4 ಲಕ್ಷಕ್ಕೂ ಹೆಚ್ಚಿನ ಜನ ಈ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕಾಗಿ ಅಗತ್ಯ ಅಂತಿಮ ಹಂತದ ಸಿದ್ಧತೆಗಳನ್ನು ಕಾಂಗ್ರೆಸ್ ಮಾಡಿಕೊಂಡಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ವಾಟರ್ ಫ್ರೂಪ್ ಬೃಹತ್ ವೇದಿಕೆಯನ್ನು ಸಹ ನಿರ್ಮಿಸಲಾಗಿದೆ.ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರು, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. 

ಭದ್ರತೆಗೆ 4500 ಪೊಲೀಸರ ನಿಯೋಜನೆಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಭದ್ರತೆಗಾಗಿ 4500 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಕಾಂಗ್ರೆಸ್ ಸಮಾವೇಶದ ಭದ್ರತೆಗಾಗಿ 4 ಡಿಐಜಿ, 25 ಎಸ್ಪಿಗಳು, 30 ಡಿವೈಎಸ್ಪಿ, 72 ಇನ್ಸ್ ಪೆಕ್ಟರ್ ಗಳು, 175 ಎಸ್ಐಗಳು ಸೇರಿದಂತೆ 100 ಕಮಾಂಡೋ, 500 ಗೃಹರಕ್ಷಕರು, 60 ಕೆ.ಎಸ್.ಆರ್.ಪಿ, 20 ಸಿಎಆರ್ ತುಕಡಿಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. 

ಅಲ್ಲದೆ, ವಾಹನಗಳ ಸಂಚಾರ ನಿಯಂತ್ರಣಕ್ಕೂ ಹೆಚ್ಚುವರಿ ಸಂಚಾರ ಪೊಲೀಸರನ್ನು ಹೊರ ಜಿಲ್ಲೆಗಳಿಂದ ನಿಯೋಜಿಸಲಾಗಿದೆ.ಗುರುವಾರ ಬೆಳಗ್ಗೆ ಮಹಾರಾಜ ಮೈದಾನದ ಆವರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಸಮಾವೇಶದ ವೇಳೆ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ನೂಕು ನುಗ್ಗಲು ಉಂಟಾಗದಂತೆ ಕ್ರಮ ವಹಿಸುವದಲ್ಲದೇ ಸಮಾವೇಶಕ್ಕೆ ಬರುವ ಜನರ ವಾಹನಗಳಿಗೆ ಸೂಕ್ತವಾದ ಸ್ಥಳಗಳಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಬೇಕು. ವಾಹನ ಸಂಚಾರ ದಟ್ಟಣೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.