ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ

| Published : Jun 23 2024, 02:04 AM IST

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಳ್ಳಕೆರೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆಚಳ್ಳಕೆರೆ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ವಿದ್ಯಾರ್ಥಿಗಳು ಎಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ರಾಜ್ಯದ ಬೇರೆ, ಬೇರೆ ಕಾಲೇಜುಗಳತ್ತ ಹೋಗಬೇಕಿತ್ತು. ಆದರೆ, ಬಯಲು ಸೀಮೆಯ ಬರದ ನಾಡಿನಲ್ಲಿ ಎಂಜಿನಿಯರಿಂಗ್ ಕಾಲೇಜು ಆರಂಭ ಸವಾಲಿನ ಕೆಲಸವಾಗುತ್ತು. ಆದರೆ, ಕಳೆದ 2013-18ರ ಅವಧಿಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಎಂಜಿನಿಯರಿಂಗ್ ಕಾಲೇಜು ಉದ್ಘಾಟಿಸುವ ಮೂಲಕ ನೂರಾರು ವರ್ಷಗಳ ಈ ಭಾಗದ ಎಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳ ಕನಸು ನನಸು ಮಾಡಿದ್ದಾರೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಶನಿವಾರ ಬಳ್ಳಾರಿ ರಸ್ತೆಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚಳ್ಳಕೆರೆ ಕ್ಷೇತ್ರದಲ್ಲಿ ಈಗಾಗಲೇ ಕಳೆದ ಮೂರು ವರ್ಷಗಳಿಂದ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು ಮುಂದಿನ ವರ್ಷ 80 ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಮುಗಿಸಿ ಮೊದಲ ತಂಡವಾಗಿ ಹೊರಬರುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ ಮಾಡುವುದಲ್ಲದೆ, ಅವರ ಉದ್ಯೋಗದ ಕನಸು ನನಸು ಮಾಡಿ ಅವರ ಭವಿಷ್ಯದ ಬದುಕನ್ನು ಉಜ್ವಲಗೊಳಿಸಲಿ ಎಂದು ಪ್ರಾರ್ಥಿಸುವೆ ಎಂದರು.

ಈಗಾಗಲೇ ಶಾಸಕ ನಿಧಿಯಿಂದ 5 ಲಕ್ಷ, ನಗರಸಭೆಯಿಂದ 6 ಲಕ್ಷ ಅನುದಾನ ನೀಡಲಾಗಿದೆ. ಪ್ರಸ್ತುತ 2024-25 ನೇ ಅವಧಿಗೆ ಶಾಸಕರ ಅನುದಾನದಲ್ಲಿ 10ಲಕ್ಷ ಹಣ ನೀಡುವ ಭರವಸೆ ನೀಡಿದರು.

ಡಾ.ಎಂ.ಎಂ.ಬೆನಾಲ್ ಮಾತನಾಡಿ, ಚಳ್ಳಕೆರೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಾರ್ಯನಿರ್ವಹಿಸಲು ಶಾಸಕ ಟಿ.ರಘುಮೂರ್ತಿ. ಪ್ರಮುಖ ಕಾರಣರಾಗಿದ್ದಾರೆ.

ಶಾಸಕರು ನೀಡಿದ ಎಲ್ಲಾ ಅನುದಾನವನ್ನು ಕಾಲೇಜಿನ ಗ್ರಂಥಾಲಯಕ್ಕೆ ಉಪಯೋಗಿಸಿಕೊಳ್ಳಲಾಗಿದೆ. ಪ್ರಸ್ತುತ ನೀಡಲಿರುವ 10 ಲಕ್ಷ ಹಣವನ್ನು ಗಣಕಯಂತ್ರ ಖರೀದಿ ಮಾಡಲು ಸಿದ್ಧತೆ ನಡೆದಿದೆ. ಬೇರೆ, ಬೇರೆ ವಿಭಾಗಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಅವಶ್ಯಕತೆ ಇದೆ, ಈ ಬಗ್ಗೆ ಶಾಸಕರಲ್ಲಿ ಮನವಿ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಪ್ರಸ್ತುತ ಕಾಲೇಜಿನಲ್ಲಿ ಕೇವಲ ಮೂವರು ಸಿಬ್ಬಂದಿ ಮಾತ್ರ ಖಾಯಂ ನೌಕರರಾಗಿದ್ದು ಉಳಿದ ಎಲ್ಲರೂ ಅತಿಥಿ ಉಪನ್ಯಾಸಕರೇ ಇದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಲಕ್ಷ್ಮೀ ದೇವಮ್ಮ, ಪೂಜಾ, ಮಲ್ಲಿಕಾರ್ಜುನ, ಸಹನ, ಸ್ವಾತಿ, ಶಿವರಾಜುಕುಮಾರ್, ರಮೇಶ್, ನಾಗಾರ್ಜುನ, ರಾಜಲಕ್ಷ್ಮೀ ಸೌಮ್ಯ, ನಗರಸಭಾ ಸದಸ್ಯ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ನಾಮಿನಿ ಸದಸ್ಯ ಬಡಗಿಪಾಪಣ್ಣ ಮುಂತಾದವರು ಉಪಸ್ಥಿತರಿದ್ದರು.