ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ : ಅಧ್ಯಕ್ಷ ಎಚ್.ವಿ.ಚಂದ್ರು

| Published : Apr 29 2025, 12:51 AM IST

ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ : ಅಧ್ಯಕ್ಷ ಎಚ್.ವಿ.ಚಂದ್ರು
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಅಕ್ಟೋಬರ್ 12 ರಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಪುತ್ಥಳಿ ನಿರ್ಮಾಣದ ಬಗ್ಗೆ ಮನವಿ ಮಾಡಲಾಗಿತ್ತು. ಅವರು ಕೂಡ ಪುತ್ಥಳಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿ ಇದರೊಂದಿಗೆ ಕನಕ ಹಾಗೂ ಭಗೀರಥ ಪುತ್ಥಳಿ ನಿರ್ಮಾಣಕ್ಕೂ ಮನವಿ ಬಂದಿದ್ದು, ಒಟ್ಟಿಗೆ ಭೂಮಿಪೂಜೆ ನೆರವೇರಿಸಲು ನಾನೇ ಬರುತ್ತೇನೆ ಎಂದು ಒಪ್ಪಿಕೊಂಡಿದ್ದರು ಎಂದು ತಿಳಿಸಿದರು.

ನಾಯಕ ಜನಾಂಗದ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ 50 ಲಕ್ಷ ಅನುದಾನ ನೀಡಿರುವುದಲ್ಲದೇ ತಾವೇ ಬಂದು ಭೂಮಿಪೂಜೆ ನೆರವೇರಿಸಿ ಹೋಗಿದ್ದಾರೆ. ಸಚಿವರಾದ ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಸಿ.ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಮಂಜುನಾಥ್ ಎಲ್ಲರಿಗೂ ನಾಯಕ ಜನಾಂಗದ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಈಗಾಗಲೇ ಸರ್ಕಾರ 50 ಲಕ್ಷ ಅನುದಾನ ನೀಡಿದೆ. ಇದು ಸಾಲದಿದ್ದರೆ ಜನಾಂಗದಿಂದಲೇ ವಂತಿಗೆ ಸಂಗ್ರಹಿಸಿ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಲಾಗುವುದು. ಜಿಲ್ಲಾಡಳಿತ ಭವನದ ಮುಂಭಾಗ ವಾಲ್ಮೀಕಿ ಪುತ್ಥಳಿಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಂದಲೇ ಪುತ್ಥಳಿ ಅನಾವರಣಗೊಳಿಸುವ ಕೆಲಸವಾಗಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಜನಾಂಗದ ಮುಖಂಡರಾದ ರಮೇಶ್, ವೆಂಕಟೇಶ, ಸಿದ್ದನಾಯಕ, ಗುಂಬಳ್ಳಿ ರಾಜಣ್ಣ, ಬಂಗಾರನಾಯಕ ಇದ್ದರು.