ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

| Published : Sep 25 2024, 01:03 AM IST

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಭಟ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ. ನನಗೆ ಹೈಕೋರ್ಟ್‌ ತೀರ್ಪಿನ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ಆರೋಪದ ಬಗ್ಗೆ ಸರಿಯಾಗಿ ತಿಳಿದುಕೊಂಡಿದ್ದು, ಹೀಗಾಗಿ ನಾನು ಘಂಟಾನುಘೋಷವಾಗಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದೇನೆ. ನನಗೆ ಬೆಂಗಳೂರಿಗೆ ತಕ್ಷಣ ಆಗಮಿಸುವಂತೆ ಯಾರಿಂದಲೂ ಕರೆ ಬಂದಿಲ್ಲ ಎಂದರು.ಮುಡಾ ಹಗರಣ ಬಿಜೆಪಿಯ ಸೃಷ್ಟಿ: ಶಾಸಕ ಭೀಮಣ್ಣ ಆರೋಪ

ಶಿರಸಿ: ಮುಡಾ ಹಗರಣವನ್ನು ಬಿಜೆಪಿಯವರು ಸೃಷ್ಟಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯಿಸಿದ್ದಾರೆ.ಮಂಗಳವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಅಧಿವೇಶದಲ್ಲಿ ವಿಧಾನಸಭೆ ಒಳಗಡೆಯೂ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರ ಆರೋಪವನ್ನು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ ತೀರ್ಪನ್ನು ಗೌರವಿಸುತ್ತೇವೆ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರಬರಲಿದ್ದಾರೆ. ಮುಖ್ಯಮಂತ್ರಿಯವರಿಗೆ ಖಂಡಿತ ನ್ಯಾಯ ದೊರೆಯಲಿದೆ ಎಂದರು.ಈ ವೇಳೆ ನಗರಸಭಾ ಸದಸ್ಯರಾದ ಪ್ರದೀಪ ಶೆಟ್ಟಿ, ಖಾದರ್ ಆನವಟ್ಟಿ, ಶೈಲೇಶ ಗಾಂಧಿ ಜೋಗಳೇಕರ ಮತ್ತಿತರರು ಇದ್ದರು.