ಬಾಲಕಿಯರ ಸರ್ಕಾರಿ ಬಾಲಮಂದಿರ ಲೋಕಾರ್ಪಣೆ

| Published : Dec 18 2023, 02:00 AM IST

ಸಾರಾಂಶ

ಗದಗ ನಗರದ ಸಂಭಾಪುರ ರಸ್ತೆಯಲ್ಲಿ 199 ಲಕ್ಷಗಳ ಅನುದಾನದಲ್ಲಿ ನಿರ್ಮಾಣಗೊಂಡಂತಹ ಅತ್ಯಾಧುನಿಕ ಸೌಲಭ್ಯವುಳ್ಳ, ಬಾಲಕಿಯರ ಸರಕಾರಿ ಬಾಲಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ಸಂಭಾಪುರ ರಸ್ತೆಯಲ್ಲಿ ₹199 ಲಕ್ಷ ಅನುದಾನದಲ್ಲಿ ನಿರ್ಮಾಣ

ಗದಗ: ನಗರದ ಸಂಭಾಪುರ ರಸ್ತೆಯಲ್ಲಿ ₹199 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಅತ್ಯಾಧುನಿಕ ಸೌಲಭ್ಯವುಳ್ಳ, ಬಾಲಕಿಯರ ಸರ್ಕಾರಿ ಬಾಲಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಉಪಸ್ಥಿತರಿದ್ದರು. ಈ ಬಾಲಕಿಯರ ಸರ್ಕಾರಿ ಬಾಲಮಂದಿರವು 100 ಮಕ್ಕಳ ಸಾಮರ್ಥ್ಯ ಹೊಂದಿರುವ ಕಟ್ಟಡವಾಗಿದ್ದು, ಈಗ ಗದಗನಲ್ಲಿ 43 ಮಕ್ಕಳು ರಕ್ಷಣೆ ಮತ್ತು ಪೋಷಣೆ ಪಡೆಯುತ್ತಿದ್ದಾರೆ.