ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

| Published : Apr 25 2025, 11:48 PM IST

ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

ಮುಕುಂದ ರಾವಂದೂರು

ಕನ್ನಡಪ್ರಭ ವಾರ್ತೆ ರಾವಂದೂರು

ಪಿರಿಯಾಪಟ್ಟಣದ ಸಾರ್ವಜನಿಕ ಅಭಿವೃದ್ಧಿ ಹಿತದೃಷ್ಟಿಯಿಂದ ಪುರಸಭೆಗೆ ಮೂಲಭೂತ ಸೌಕರ್ಯಗಳಿಗೆ 17 ಕೋಟಿ ರು. ಗಳ ವಿಶೇಷ ಅನುದಾನ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಾಯಿ ಮತ್ತು ಮಕ್ಕಳ ಮಾದರಿ ಆಸ್ಪತ್ರೆಗೆ ಹೆಚ್ಚುವರಿ ಸಿಬ್ಬಂದಿಗೆ ಅನುದಾನವನ್ನು ಸಹ ನೀಡಲಾಗಿದೆ.

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ರೇಷ್ಮೆ ಇಲಾಖೆಯ ಸಹಯೋಗದೊಂದಿಗೆ ತಾಲೂಕಿನ 44 ಶಾಲೆಗಳಿಗೆ ಸ್ಮಾರ್ಟ್ ಕ್ಮಾಸ್ ತರಗತಿ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷಿನಲ್ ವತಿಯಿಂದ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮಂಡಳಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮಂಡಳಿ, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ ಮೈಸೂರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಪಶು ಸಂಗೋಪನಾ ಇಲಾಖೆ, ಕರ್ನಾಟಕ ರೂರಲ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಲಿಮಿಟೆಡ್, ಜಲಸಂಪನ್ಮೂಲ ಇಲಾಖೆ ಹಾರಂಗಿ ಉಪ ವಿಭಾಗ, ಕರ್ನಾಟಕ ನಗರ ನೀರು ಒಳಚರಂಡಿ ಮಂಡಳಿ, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ, ಕರ್ನಾಟಕ ಹೌಸಿಂಗ್ ಬೋರ್ಡ್ ಸೇರಿದಂತೆ ಒಟ್ಟು 103 ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದ್ದು, ಪಂಚಾಯತ್ ರಾಜ್ಉ ಪ ವಿಭಾಗಕ್ಕೆ ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟಕ್ಕೆ ಒಟ್ಟು 19 ಕಾಮಗಾರಿ ಉದ್ಘಾಟನೆಗೊಳ್ಳಲಿವೆ.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಬಿವೃದ್ಧಿ ನಿಗಮ, ಗ್ರಾಮೀಣ ಅಭಿವೃದ್ಧಿ ಯೋಜನೆ, ನಗರ ವಸತಿ ಯೋಜನೆ , ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಯೋಜನೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಹಕಾರ ಇಲಾಖೆ ಹಾಗೂ ಇನ್ನೂ ವಿವಿಧ ಇಲಾಖೆಗಳ ಸಾವಿರಾರು ಜನ ಫಲಾನುಭವಿಗಳಿ ಸರ್ಕಾರಿ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

ಇದೇ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮಕ್ಕೆ ತಾಲೂಕು ಕ್ರೀಡಾಂಗಣವು ಈಗಾಗಲೇ ಸಿದ್ಧಗೊಂಡಿದೆ.

ಬೃಹತ್ ವೇದಿಕೆ - ಕಾರ್ಯಕ್ರಮಕ್ಕೆ ಜರ್ಮನ್ ಮಾದರಿಯ ಸ್ಟೇಜ್ ಹಾಕಲಾಗಿದ್ದು, 30 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಕ್ರೀಡಾಂಗಣದ ಎರಡೂ ಕಡೆಯಲ್ಲಿಯೂ ವಿವಿಧ ಇಲಾಖೆಯ ಸರ್ಕಾರಿ ಯೋಜನೆಗಳ ವಸ್ತು ಪ್ರದರ್ಶನ ಮತ್ತು ವಿತರಣಾ ಮಳಿಗೆಗೆಳು ಹಾಗೂ ಬಂದಂತಹ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

ರಾಸುಗಳಿಗೆ ಕಾಲುಬಾಯಿ ಲಸಿಕೆಗೆ ಚಾಲನೆ:

ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ರಾಸುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಈ ರಾಜ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ. ವೆಂಕಟೇಶ್ ಅವರ ತವರಿನ ತಾಲೂಕಿನಲ್ಲಿ ಚಾಲನೆ ನೀಡಲಾಗುತ್ತದೆ.

ಇದಲ್ಲದೆ ತಾಲೂಕಿಗೆ ಬಂದಂತಹ ಪ್ರವಾಸಿಗರಿಗಾಗಲಿ, ನೌಕರರಿಗಾಗಲಿ ತಂಗಲು ಸುಸರ್ಜಿತ ಪ್ರವಾಸಿ ಮಂದಿರಕ್ಕೆ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಪ್ರವಾಸಿ ಮಂದಿರಗಳ ಅಭಿವೃದ್ಧಿಗೆ ಅನುದಾನವನ್ನು ಸಹ ನೀಡಲಾಗಿದೆ.ತಾಲೂಕಿನ ಅಬಿವೃದ್ಧಿ ಕಾರ್ಯಕ್ರಮಗಳಿಗೆ ಜನರ ಪ್ರೀತಿ ವಿಶ್ವಾಸವೇ ನನಗೆ ಶ್ರೀರಕ್ಷೆಯಾಗಿದೆ. ಆದುದ್ದರಿಂದ ಮೈಸೂರು ಜಿಲ್ಲೆಯಲ್ಲಿಯೇ ಪಿರಿಯಾಪಟ್ಟಣ ಮಾದರಿ ತಾಲೂಕನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದು, ತಾಲೂಕಿನ ಜನರು ಹೆಮ್ಮೆಪಡುವಂತಹ ವಿಷಯವಾಗಿದೆ.

-ಕೆ.ವೆಂಕಟೇಶ್ ಸಚಿವತಾಲೂಕಿನ ಇತಿಹಾಸದಲ್ಲಿ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ತಾಲೂಕಿನ ಜನರಿಗೆ ಸಚಿವ ಕೆ. ವೆಂಕಟೇಶ್ ರವರಿಗೆ ಶ್ರೀರಕ್ಷೆಯಾಗಿದೆ.

- ಕೆ.ಟಿ. ಪ್ರಕಾಶ್, ತಾಪಂ ಮಾಜಿ ಸದಸ್ಯ

ತಾಲೂಕಿಗೆ ಶಾಶ್ವತ ಯೋಜನೆಗಳನ್ನು ತಂದು ಜನಮಾನಸದಲ್ಲಿ ಉಳಿಯುವಂತಹ ಕೆಲಸ ಮಾಡುವಲ್ಲಿ ಸಚಿವ ಕೆ. ವೆಂಕಟೇಶ್ ಅವರ ಕೊಡುಗೆ ಅಪಾರವಾಗಿದೆ.

- ರಜಿನಿ ಬಾವಲಾಳು