ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ

| Published : Aug 04 2024, 01:18 AM IST

ಸಾರಾಂಶ

ಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.

ಅಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ ೧೧.೧೦ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ರಸ್ತೆ ಮಾರ್ಗವಾಗಿ ತೆರಳಿ, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು. ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸುವರು. ಮಧ್ಯಾಹ್ನ ಗೋಕಾಕ ನಗರಕ್ಕೆ ಭೇಟಿ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿ, ಪ್ರವಾಹ ಪರಿಸ್ಥಿತಿ ಕುರಿತು ಅವಲೋಕನ ಮಾಡುವರು. ಮಧ್ಯಾಹ್ನ ೩.೨೫ಕ್ಕೆ ಕಾಗವಾಡ ತಾಲೂಕಿನ ಜೂಗುಳ ಗ್ರಾಮಕ್ಕೆ ಭೇಟಿ ನೀಡುವರು. ೩.೪೦ಕ್ಕೆ ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆಗೆ ಭೇಟಿ ನೀಡಿ, ವೀಕ್ಷಣೆ ಮಾಡುವರು. ಬಳಿಕ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿ, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯಲಿದ್ದು, ಸಂಜೆ ೬.೪೫ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.