ಸಾರಾಂಶ
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.
ಮುಂಡಗೋಡ: ಮೇ ೩ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸೇರಿ ಸಭಾ ಕಾರ್ಯಕ್ರಮ ನಡೆಯಲಿರುವ ಸ್ಥಳ ಪಟ್ಟಣದ ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು. ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂಡಗೊಡ- ಯಲ್ಲಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತ ಪ್ರದೇಶದಿಂದ ಸುಮಾರು ೧೫ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಅಗತ್ಯ ಆಸನ ಹಾಗೂ ಸಕಲ ಸವಲತ್ತು ಒದಗಿಸಲಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಸಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಎಚ್.ಎಂ. ನಾಯ್ಕ, ಧರ್ಮರಾಜ ನಡಗೇರ, ಗೋಪಾಲ ಪಾಟೀಲ, ರಜಾ ಪಠಾಣ, ಬಸವರಾಜ ಸಂಗಮೆಶ್ವರ, ನಾರಾಯಣ ಗುರಪ್ಪನವರ, ನಿಖಿಲ ರಾಯ್ಕರ ಮುಂತಾದವರು ಉಪಸ್ಥಿತರಿದ್ದರು.