ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್. ನಂದಿನಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಮಂಡ್ಯದ ವಿ.ಸಿ.ಫಾರ್ಮ್ ನಲ್ಲಿ ಆಯೋಜಿಸಿದ್ದ ಕೃಷಿ ಮೇಳ ಉದ್ಘಾಟನೆಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಗಡಿಭಾಗ ನಿಡಘಟ್ಟದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ಪ್ರಯಾಣ ರದ್ದುಗೊಳಿಸಿ ಬೆಂಗಳೂರಿಂದ ರಸ್ತೆ ಮೂಲಕ ಕಾರಿನಲ್ಲಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಮಧ್ಯಾಹ್ನ 12:15 ರ ಸುಮಾರಿಗೆ ತಾಲೂಕಿನ ನಿಡಘಟ್ಟ ಬಳಿ ಆಗಮಿಸಿದ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬರಮಾಡಿಕೊಂಡು ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ ರೇಷ್ಮೆ ಹಾರ ಹಾಕಿ ಸಾಂಪ್ರದಾಯಿಕ ಸ್ವಾಗತ ಕೋರಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್. ನಂದಿನಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.ನಂತರ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವಿಜಯಲಕ್ಷ್ಮೀ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ತೈಲೂರು ಚೆಲುವರಾಜು, ನಿರ್ದೇಶಕ ಪಿ.ಸಂದರ್ಶ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾಪಂ ಮಾಜಿ ಸದಸ್ಯ ಕೆ.ಆರ್. ಮಹೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಅಶ್ವಿನ್, ಮನ್ಮಲ್ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಪರ ಘೋಷಣೆ ಕೂಗಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು.