28, 30ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

| Published : Apr 21 2024, 02:22 AM IST

28, 30ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರಿದ್ದು, ಏ.28 ಮತ್ತು 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರಿದ್ದು, ಏ.28 ಮತ್ತು 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.28ರಂದು ಅಥಣಿಗೆ ಆಗಮಿಸಿ ಬೆಳಗ್ಗೆ 11.30ಕ್ಕೆ ಉಗಾರಖುರ್ದದಲ್ಲಿ ಪ್ರಿಯಾಂಕಾ ಜಾರಕಿಹೊಳಿ ಪರ, ಮಧ್ಯಾಹ್ನ 2.30ಕ್ಕೆ ಯರಗಟ್ಟಿಯಲ್ಲಿ ಮೃಣಾಲ್ ಹೆಬ್ಬಾಳಕರ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಅಂದು ಸಂಜೆ 6 ಗಂಟೆಗೆ ಸಿಂಧನೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. 29ರಂದು ಕೂಡ್ಲಗಿ, ಕುಷ್ಟಗಿ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ನಡೆಸುವರು.

30ರಂದು 11 ಗಂಟೆಗೆ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಪರ, 2.45ಕ್ಕೆ ಗೋಕಾಕಲ್ಲಿ ಮೃಣಾಲ್‌ ಹೆಬ್ಬಾಳಕರ್ ಪರ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಅಂದು ಸಂಜೆ 5.45ಕ್ಕೆ ಗಂಗಾವತಿಯಲ್ಲಿ ಪ್ರಚಾರ ಸಭೆ ನಡೆಸುವರು.

ಸಿದ್ದರಾಮಯ್ಯ ಆಖಾಡಕ್ಕಿಳಿಯುವುದರಿಂದ ಚುನಾವಣೆ ಕಣ ರಂಗೇರಲಿದೆ. ವಿರೋಧಿಗಳ ವಿರುದ್ಧ ಒಂದೊಂದೇ ಅಸ್ತ್ರಗಳನ್ನು ಹೊರಗೆ ತೆಗೆಯುವ ಮೂಲಕ ಕಣದಲ್ಲಿ ಆರೋಪ ಪರತ್ಯಾರೋಪಗಳು ಜೋರಾಗಲಿವೆ. ಸಿದ್ದರಾಮಯ್ಯ ಪ್ರಚಾರದಿಂದ ಕಾಂಗ್ರೆಸ್ ನಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.